Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಜಿಲ್ಲಾಡಳಿತದಿಂದ ವೀರ ರಾಣಿ...

ರಾಯಚೂರು| ಜಿಲ್ಲಾಡಳಿತದಿಂದ ವೀರ ರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ11 Nov 2026 7:45 PM IST
share
ರಾಯಚೂರು| ಜಿಲ್ಲಾಡಳಿತದಿಂದ ವೀರ ರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ರಾಯಚೂರು: ಇತಿಹಾಸದ ಪುಟಗಳಲ್ಲಿ ಸಾಹಸ, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ವೀರರಾಣಿ ಒಣಕೆ ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೋಪಾಲ ಗೆಣ್ಣೂರು ಅವರು ಹೇಳಿದರು.

ನವೆಂಬರ್ 11ರ ಬುಧವಾರ ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿತ್ರದುರ್ಗದ ಮದಕರಿ ನಾಯಕನ ಆಸ್ಥಾನದ ಇತಿಹಾಸವು ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದೆ. ಹೈದರಾಲಿ ಸೇನೆಯು ಚಿತ್ರದುರ್ಗದ ಕೋಟೆಯನ್ನು ಭೇದಿಸಲು ಎರಡು-ಮೂರು ಬಾರಿ ಪ್ರಯತ್ನಿಸಿದರೂ ಯಶಸ್ವಿಯಾಗಿರಲಿಲ್ಲ. ಕೊನೆಗೆ ಕಳ್ಳಮಾರ್ಗದಿಂದ ಕೋಟೆಯೊಳಗೆ ನುಗ್ಗಿ ವಿಜಯ ಸಾಧಿಸಲು ಹೈದರಾಲಿ ಮಾಡಿದ ಕುತಂತ್ರವನ್ನು ಓಬವ್ವ ಧೈರ್ಯದಿಂದ ಮೆಟ್ಟಿನಿಂತಳು. ಊಟದ ವೇಳೆ ಕೋಟೆಯ ಕಾವಲುಗಾರ ಮುದ್ದಹನುಮಪ್ಪನಿಗೆ ಕಾವಲು ಕಾಯುವ ಜವಾಬ್ದಾರಿಯಿದ್ದಾಗ, ಒಳಗೆ ನುಗ್ಗುತ್ತಿದ್ದ ಶತ್ರು ಸೈನಿಕರನ್ನು ಒಬ್ಬೊಬ್ಬರಾಗಿ ಒಣಕೆಯಿಂದ ಹೊಡೆದುರುಳಿಸಿ, ಕೋಟೆಯನ್ನು ಮತ್ತು ಸಾಮ್ರಾಜ್ಯವನ್ನು ರಕ್ಷಿಸಿದ ಆಕೆಯ ಸಾಹಸಗಾಥೆ ರೋಮಾಂಚನಕಾರಿಯಾಗಿದೆ ಎಂದರು.

ಒಬ್ಬ ಮಹಿಳೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ನಾಡನ್ನು ರಕ್ಷಿಸಿದ ಆ ಶೌರ್ಯವು ಇಂದಿನ ಹೆಣ್ಣುಮಕ್ಕಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸದ ಪ್ರತೀಕವಾಗಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದ ಸಂವಿಧಾನವು ಇಂದು ಎಲ್ಲರಿಗೂ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದು, ಇಂತಹ ವೀರಮಾತೆಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಮಹಿಳೆಯರು ಮುನ್ನಡೆಯಬೇಕಿದೆ ಎಂದರು.

ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿಯೂ ಧೈರ್ಯದಿಂದ ಮುನ್ನಡೆಯಬೇಕು ಮತ್ತು ಕಾನೂನುಗಳು ಹಾಗೂ ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಹೆಣ್ಣು ಮಗಳೂ ಸಹ ಧೈರ್ಯವನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಮುಂಚೂಣಿಗೆ ಬರಬೇಕೆಂದರು.

ಉಪನ್ಯಾಪಕರಾಗಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಸಂಯೋಜಕರಾದ ಡಾ.ಶರಣಪ್ಪ ಚಲವಾದಿ ಅವರು ಮಾತನಾಡಿ, ಇಂದಿನ ಆಧುನಿಕ ಯುಗದ ಮಹಿಳೆಯರು ತಮ್ಮ ಆತ್ಮಬಿಂಬ, ರಕ್ಷಣೆ ಹಾಗೂ ಧೈರ್ಯಕ್ಕಾಗಿ ಹೋರಾಡಬೇಕಾದ ಅನಿವಾರ್ಯತೆ ಇದೆ. ಕಷ್ಟದ ಸಂದರ್ಭಗಳಲ್ಲಿ ಎದೆಗುಂದದೆ, ಒನಕೆ ಓಬವ್ವಳಂತಹ ವೀರ ನಾರಿಯರ ಧೈರ್ಯ, ಸಾಹಸ ಹಾಗೂ ಸಮಯ ಪ್ರಜ್ಞೆಯನ್ನು ಇಂದಿನ ಪ್ರತಿಯೊಬ್ಬ ಮಹಿಳೆಯೂ ಮೈಗೂಡಿಸಿಕೊಳ್ಳಬೇಕಿದೆ. ದೇಶ ಮತ್ತು ಸಮಾಜದ ರಕ್ಷಣೆಗಾಗಿ ಧೈರ್ಯದಿಂದ ನಿಲ್ಲುವ ಗುಣವೇ ನಿಜವಾದ ಸ್ತ್ರೀ ಶಕ್ತಿಯ ಪ್ರತೀಕವಾಗಿದೆ ಎಂದರು.

ವೀರರಾಣಿ ಒನಕೆ ಓಬವ್ವ ಜಯಂತಿ ಅಂಗವಾಗಿ ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿ ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಸೇರಿದಂತೆ ವಿವಿಧ ಗಣ್ಯರು, ಸಮಾಜದ ಮುಖಂಡರು ಮಾಲಾರ್ಪಣೆ ಮಾಡಿದರು.

ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕಲಾ ತಂಡಗಳನ್ನು ಆಯೋಜನೆ ಮಾಡಲಾಗಿತ್ತು.

ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಸಹಾಯಕ ಅಂಭಿಯತರರಾದ ಜೈಪಾಲ್ ರೆಡ್ಡಿ, ಸಮಾಜದ ಮುಖಂಡರಾದ ಮಲ್ಲೇಶ ಕೋಮಿನಿ, ಲಲಿತಾ ಅಂಜಿನೇಯ, ಜಗನ್ನಾಥ ಸುಂಕರಿ, ಅರ್ಚನಾ ಸುಂಕರಿ, ಸಂತೋಷ ನಂದಿನಿ, ಮಾರೆಪ್ಪ, ಎಂ.ವಸಂತ, ದಯಾನಂದ, ಶಿವರಾಜ್, ವಿಶ್ವನಾಥ ಪಟ್ಟಿ, ದೇವಿಂದ್ರ, ರಾಘವೇಂದ್ರ, ಭೀಮಣ್ಣ, ಗಿರಿಯಪ್ಪ ಸೇರಿದಂತೆ ಇತರರು ಇದ್ದರು

Tags

RaichurVeera RaniOnake Obavva
share
ವಾರ್ತಾಭಾರತಿ
ವಾರ್ತಾಭಾರತಿ
Next Story
X