Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಹೊಸ ರಾಜಕೀಯ ಪರ್ಯಾಯ ಪಕ್ಷ...

Raichur | ಹೊಸ ರಾಜಕೀಯ ಪರ್ಯಾಯ ಪಕ್ಷ ನಿರ್ಮಾಣಕ್ಕೆ ಚೇತನ್ ಅಹಿಂಸಾ ಕರೆ

ವಾರ್ತಾಭಾರತಿವಾರ್ತಾಭಾರತಿ5 July 2026 11:00 PM IST
share
Raichur | ಹೊಸ ರಾಜಕೀಯ ಪರ್ಯಾಯ ಪಕ್ಷ ನಿರ್ಮಾಣಕ್ಕೆ ಚೇತನ್ ಅಹಿಂಸಾ ಕರೆ

ರಾಯಚೂರು: ರಾಜ್ಯದಲ್ಲಿ ಹೊಸ ರಾಜಕೀಯ ಪರ್ಯಾಯವನ್ನು ನಿರ್ಮಿಸುವ ಉದ್ದೇಶದಿಂದ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ ನಗರದ ನೃಪತುಂಗ ಹೋಟೆಲ್‌ನಲ್ಲಿ ಭಾನುವಾರ ರಾಜಕೀಯ ಮುನ್ನೋಟ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಚೇತನ್ ಅಹಿಂಸಾ, ಜನಸಾಮಾನ್ಯರ ಏಳಿಗೆ ಹಾಗೂ ಸಮ ಸಮಾಜದ ನಿರ್ಮಾಣಕ್ಕಾಗಿ ಹೊಸ ರಾಜಕೀಯ ಪಕ್ಷವನ್ನು ಕಟ್ಟುವ ಅಗತ್ಯವಿದೆ ಎಂದು ಹೇಳಿದರು.

ಪ್ರಸ್ತುತ ರಾಜಕೀಯ ವ್ಯವಸ್ಥೆಗೆ ಪರ್ಯಾಯವಾಗಿ ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ತತ್ವಗಳ ಆಧಾರದ ಮೇಲೆ ಹೊಸ ರಾಜಕೀಯ ಪಕ್ಷವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

2028ರಲ್ಲಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಗುರಿ ಹೊಂದಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಬದಲಾವಣೆಗೆ ಮುನ್ನುಡಿ ಬರೆಯುವ ಸಂಕಲ್ಪವಿದೆ. ಸಮಾನತೆಯನ್ನು ಬಯಸುವ ಎಲ್ಲರೂ ಈ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಆಶಯಗಳಿಗೆ ಸಮರ್ಪಕ ಪ್ರತಿನಿಧಿತ್ವ ದೊರೆಯುತ್ತಿಲ್ಲ. ಆದ್ದರಿಂದ ಯುವಜನರು, ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ ಜನಪರ ಹಾಗೂ ಸಂವಿಧಾನಬದ್ಧ ರಾಜಕೀಯ ಪರ್ಯಾಯವನ್ನು ನಿರ್ಮಿಸುವುದು ಈ ಪ್ರಯತ್ನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ರಾಜ್ಯದ ಸಮಕಾಲೀನ ರಾಜಕೀಯ ಬೆಳವಣಿಗೆಗಳು, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮುಂದಿನ ರಾಜಕೀಯ ದಿಕ್ಕಿನ ಕುರಿತು ವ್ಯಾಪಕ ಚರ್ಚೆ ನಡೆಯಿತು. ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X