Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಹಠಾತ್ ದಾಳಿ ನಡೆಸಿ ಬಾಲ...

ರಾಯಚೂರು | ಹಠಾತ್ ದಾಳಿ ನಡೆಸಿ ಬಾಲ ಕಾರ್ಮಿಕರ ರಕ್ಷಣೆ : ಇಟ್ಟಿಗೆ ಭಟ್ಟಿ ಮಾಲಕರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 Jun 2025 5:13 PM IST
share
ರಾಯಚೂರು | ಹಠಾತ್ ದಾಳಿ ನಡೆಸಿ ಬಾಲ ಕಾರ್ಮಿಕರ ರಕ್ಷಣೆ : ಇಟ್ಟಿಗೆ ಭಟ್ಟಿ ಮಾಲಕರ ವಿರುದ್ಧ ಪ್ರಕರಣ ದಾಖಲು

ರಾಯಚೂರು : ದೇವದುರ್ಗ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರ ಕಾರ್ಯಾಚರಣೆ ನಡೆಸಿ, ದುಡಿಯಲು ಹೋಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಶಾಲೆಗೆ ಸೇರಿಸಿ ಯಶಸ್ವಿ ಕಾರ್ಯಚರಣೆ ಮಾಡಿ ಜನರಿಂದ ಮೆಚ್ಚುಗೆಗಳಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರ ತಂಡವು ಇದೀಗ ಮತ್ತೊಂದು ಕಾರ್ಯಾಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದೆ.

ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಟಾಸ್ಕ್ ಪೋರ್ಸ್ ಸಮಿತಿ ತಂಡವು ರಾಯಚೂರು ತಾಲೂಕಿನ ಲಿಂಗನಖಾನದೊಡ್ಡಿಯ ಎಸ್.ಆರ್.ಬಿ ಇಟ್ಟಿಗೆ ಭಟ್ಟಿ ಮೇಲೆ ಹಠಾತ್ ದಾಳಿ ನಡೆಸಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಾರ್ಮಿಕ ಮತ್ತು ಒಬ್ಬ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಿದೆ. ಈ ಬಾಲ ಕಾರ್ಮಿಕರನ್ನು ಸರ್ಕಾರಿ ಬಾಲಕಿಯರ ಬಾಲಮಂದಿರ ರಾಯಚೂರು ಅವರಿಗೆ ಒಪ್ಪಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಮೆ.ಎಸ್.ಆರ್.ಬಿ ಇಟ್ಟಿಗೆ ಭಟ್ಟಿಯ ಮಾಲಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, 1ನೇ ವೃತ್ತ ರಾಯಚೂರಿನ ಕಾರ್ಮಿಕ ನಿರೀಕ್ಷಕರಾದ ಮುಹಮ್ಮದ್ ಉಮರ್ ಅಬ್ದುಲ್ ಘನಿ, ಇಡಪನೂರ ಪೊಲೀಸ್ ಇಲಾಖೆಯ ಶಂಕರಗೌಡ, ರಾಯಚೂರು ಮಕ್ಕಳ ಸಹಾಯವಾಣಿ ಘಟಕದ ತಾಯರಾಜ್ ಹಾಗೂ ಲಿಂಗನಖಾನದೊಡ್ಡಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ತಾಯಪ್ಪ ಅವರು ದಾಳಿಯಲ್ಲಿ ಭಾಗಿಯಾಗಿ ಉತ್ತಮ ಕಾರ್ಯ ಮಾಡಿದ್ದಾರೆ.

ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ :

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ 50,000 ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಣೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಮಾಹಿತಿ ನೀಡಬಹುದಾಗಿದೆ ಎಂದು ಇದೆ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X