Raichur | ಬಾಲ್ಯ ವಿವಾಹ ಆರೋಪ : ಅಧಿಕಾರಿಗಳಿಂದ ದಾಳಿ

ಸಾಂದರ್ಭಿಕ ಚಿತ್ರ
ರಾಯಚೂರು: ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ವಿವಾಹಕ್ಕೆ ಸಕಲ ಸಿದ್ಧತೆ ನಡೆಸಲಾಗಿದ್ದ ಸಂದರ್ಭದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬಾಲ್ಯ ವಿವಾಹವನ್ನು ತಡೆದ ಘಟನೆ ಗುರುವಾರ ನಡೆದಿದೆ.
ಬಾಲಕಿಯ ಪೋಷಕರು ಮದುವೆ ಮಾಡಲು ಮುಂದಾಗಿರುವ ಕುರಿತು ಸ್ಥಳೀಯರು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು.
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮೀ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೋಹನ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನಿರ್ಮಲ ಎಂ. ಅವರು ಜಂಟಿಯಾಗಿ ಕೂಡ್ಲೂರು ಗ್ರಾಮದ ಬಾಲಕಿಯ ಮನೆಗೆ ಭೇಟಿ ನೀಡಿ ಬಾಲ್ಯ ವಿವಾಹವನ್ನು ತಡೆದರು.
ಬಳಿಕ ಬಾಲಕಿಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ದಾಖಲಿಸಲಾಗಿದೆ ಎಂದು ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




