Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬಾಲ್ಯ ವಿವಾಹದ ಆರೋಪ: ಪತ್ನಿ...

ರಾಯಚೂರು | ಬಾಲ್ಯ ವಿವಾಹದ ಆರೋಪ: ಪತ್ನಿ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ ಪತಿಗೆ ಎದುರಾಯಿತು ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ20 July 2025 2:43 PM IST
share
ರಾಯಚೂರು | ಬಾಲ್ಯ ವಿವಾಹದ ಆರೋಪ: ಪತ್ನಿ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ ಪತಿಗೆ ಎದುರಾಯಿತು ಸಂಕಷ್ಟ

ರಾಯಚೂರು: ಗುರ್ಝಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆ ಮೇಲಿಂದ ಪತಿಯನ್ನು ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಬಾಲ್ಯ ವಿವಾಹದ ಆರೋಪ ಕೇಳಿ ಬಂದಿದೆ.

ರಾಯಚೂರು ಜಿಲ್ಲೆಯ ಗುರ್ಜಾಪುರ ಬ್ಯಾರೇಜ್‌ನಲ್ಲಿ ಪತ್ನಿಯೇ ಪತಿಯನ್ನು ನೂಕಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಲು ಹಿಂದೇಟು ಹಾಕಿ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಮುಖ ಕಾರಣವೀಗ ಬಯಲಾಗಿದ್ದು, ಇದು ಬಾಲ್ಯವಿವಾಹ ನಡೆದಿರುವ ಸ್ಪೋಟಕ ಅಂಶ ಬೆಳಕಿಗೆ ಬಂದಿದೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರು ಗುರ್ಜಾಪುರ ಬ್ಯಾರೇಜ್‌ನಿಂದ ಹರಿಯುವ ನೀರಿಗೆ ಪತಿಯನ್ನು ಪತ್ನಿಯೇ ನೂಕಿರುವ ಘಟನೆ ಜುಲೈ 11ರಂದು ನಡೆದಿತ್ತು. ಪತಿಯೇ ಪತ್ನಿಯ ವಿರುದ್ಧ ಆರೋಪ ಮಾಡಿದ್ದರೂ, ರಾಯಚೂರಿನ ಶಕ್ತಿನಗರ ಪೊಲೀಸ್ ಠಾಣೆಗೆ ದೂರು ನೀಡದೇ ರಾಜಿ ಸಂಧಾನದ ಮೂಲಕವೇ ವಿವಾಹ ವಿಚ್ಛೇದನ ಪತ್ರಕ್ಕೆ ಸಹಿ ಮಾಡಿಸಿಕೊಳ್ಳಲಾಗಿತ್ತು.

ಆದರೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲಕಿ ಓದಿರುವ ಶಾಲೆಗೆ ತೆರಳಿ ದಾಖಲಾತಿ ಪರಿಶೀಲನೆ ನಡೆಸಿದಾಗ ಶಾಲಾ ದಾಖಲಾತಿಯಲ್ಲಿ ಜನ್ಮ ದಿನಾಂಕ ಪರಿಶೀಲಿಸಿದಾಗ ಅಪ್ರಾಪ್ತ ಬಾಲಕಿ ಎಂಬುದು ತಿಳಿದುಬಂದಿದೆ.

ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪತ್ರ:

ಬಾಲಕಿಯನ್ನು ಮದುವೆ ಮಾಡಿಕೊಂಡಿರುವುದು ದೃಢಪಟ್ಟಿರುವುದರಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲು ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಶಕ್ತಿನಗರದ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಏಪ್ರೀಲ್ 18ರಂದು ಮದುವೆ ನಡೆದಿದ್ದು, ವಿವಾಹ ನಡೆದ ಸ್ಥಳ ರಾಯಚೂರು ವ್ಯಾಪ್ತಿಗೆ ಬರುವುದರಿಂದ ವಿವಾಹ ನೇರವೇರಿಸಿದವರ ಮತ್ತು ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕಚೇರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸುಂಬೆ ಮಾತನಾಡಿ, ಪತಿಯನ್ನು ಪತ್ನಿಯೇ ತಳ್ಳಿದ್ದಾಳೆ ಎನ್ನುವ ಘಟನೆಯಲ್ಲಿ ಅಪ್ರಾಪ್ತ ಬಾಲಕಿಗೆ ತಾತಪ್ಪ ಮದುವೆಯಾಗಿರುವುದು ದೃಢಪಟ್ಟಿದೆ. ಯಾದಗಿರಿ ಜಿಲ್ಲೆಯಲ್ಲಿ ಬಾಲಕಿ ವಿದ್ಯಾಭ್ಯಾಸ ಮಾಡಿರುವ ಶಾಲೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. 16 ವರ್ಷದೊಳಗಿನ ಬಾಲಕಿಯನ್ನು ಮದುವೆ ಆಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X