ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ
ಯಾದಗಿರಿ ಜಿಪಂ ಸಿಇಒ ಆಗಿ ನೇಮಕ

ರಾಯಚೂರು : ರಾಯಚೂರು ನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಜುಬಿನ್ ಮೊಹಾಪಾತ್ರ, ಐಎಎಸ್ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಅವರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ವರ್ಗಾವಣೆ ಆದೇಶ ಪ್ರಕಟಿಸಲಾಗಿದೆ.
ಪ್ರಸ್ತುತ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ, ಜುಬಿನ್ ಮೊಹಾಪಾತ್ರ ಹಾಗೂ ಸಾಹಿತ್ಯ ಎಂ. ಆಲದಕಟ್ಟಿ ಅವರ ವರ್ಗಾವಣೆ ಆದೇಶಗಳು ಭಾರತ ಚುನಾವಣಾ ಆಯೋಗದ ಅನುಮೋದನೆಗೆ ಒಳಪಟ್ಟಿರುತ್ತವೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
Next Story




