ರಾಯಚೂರು | ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ : ಓರ್ವ ಮೃತ್ಯು

ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡೆದ ಜಗಳದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, 10 ಜನರು ಗಾಯಗೊಂಡ ಘಟನೆ ಮಾನ್ವಿ ತಾಲೂಕಿನ ಮಲ್ಲಿಗೆಮಡುವು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಎರಡು ಗುಂಪುಗಳ ಗಲಾಟೆಯಲ್ಲಿ ತೀವ್ರಗಾಯಗೊಂಡಿದ್ದ ಭೀಮರಾಯ (42) ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಿಗಿಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Next Story





