ರಾಯಚೂರು: ಮೇ 07ರಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ

ರಾಯಚೂರು ಮೇ 05: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೇ.07ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ ಜಿಂದಾಲ್ ಏರ್‌ಸ್ಟ್ರಿಪ್ ಮಾರ್ಗವಾಗಿ ಹೊರಟು ಬೆಳಗ್ಗೆ 11.40ಕ್ಕೆ ರಾಯಚೂರು ನಗರದಲ್ಲಿನ ಕೃಷಿ ವಿವಿಯ ಹೆಲಿಪ್ಯಾಡ್‌ಗೆ ಆಗಮಿಸುವರು. ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ, ಸಭೆ ನಡೆಸುವರು. ಸಂಜೆ 4 ಗಂಟೆಗೆ ರಾಯಚೂರು ಕೃಷಿ ವಿವಿಯ ಹೆಲಿಪ್ಯಾಡ್‌ನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ಕೆ.ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





