Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. RAICHURU | ಮುಖ್ಯಮಂತ್ರಿ...

RAICHURU | ಮುಖ್ಯಮಂತ್ರಿ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ!

ವಾರ್ತಾಭಾರತಿವಾರ್ತಾಭಾರತಿ8 Feb 2026 4:19 PM IST
share
RAICHURU | ಮುಖ್ಯಮಂತ್ರಿ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ!
ನಿಗದಿಯಾಗಿದ್ದ ಹೆಲಿಪ್ಯಾಡ್ ಬದಲು ಬೇರೊಂದು ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್: ಅಧಿಕಾರಿಗಳು ಕಕ್ಕಾಬಿಕ್ಕಿ

ರಾಯಚೂರು, ಫೆ.8: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರ ಪುತ್ರನ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಅವರಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ಬದಲು ಬೇರೊಂದು ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆದ ಘಟನೆ ರವಿವಾರ ವರದಿಯಾಗಿದೆ. ಇದರಿಂದ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಸಿದ್ಧರಾಗಿದ್ದ ಅಧಿಕಾರಿಗಳು ಗೊಂದಲಕ್ಕೊಳಗಾದರು.

ಮುಖ್ಯಮಂತ್ರಿಯಿದ್ದ ಹೆಲಿಕಾಪ್ಟರ್ ಇಳಿಯಲು ರಾಯಚೂರು ರಸ್ತೆಯಲ್ಲಿ ಹೆಲಿಪ್ಯಾಡ್ ಸಿದ್ಧಪಡಿಸಲಾಗಿತ್ತು. ಎಲ್ಲ ಅಧಿಕಾರಿಗಳು ಮುಖ್ಯಮಂತ್ರಿಯ ಆಗಮನಕ್ಕಾಗಿ ಅಲ್ಲಿ ಕಾಯುತ್ತಿದ್ದರು. ಅಲ್ಲಿಗೆ ಹೆಲಿಕಾಪ್ಟರ್ ಬಂದಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಆಗಮಿಸಿದ್ದಾರೆಂದು ಸ್ವಾಗತಿಸಲು ಅಧಿಕಾರಿಗಳು ಸಿದ್ಧರಾದರು. ಆದರೆ, ಈ ಹೆಲಿಕಾಪ್ಟರ್ ನಲ್ಲಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಇದ್ದರು. ಇದರಿಂದ ಕ್ಷಣಕಾಲ ವಿಚಲಿತಗೊಂಡ ಅಧಿಕಾರಿಗಳು ಮುಖ್ಯಮಂತ್ರಿಯ ಹೆಲಿಕಾಪ್ಟರ್ ಎಲ್ಲಿ ಹೋಯಿತು ಎನ್ನುವ ಗೊಂದಲಕ್ಕೆ ಒಳಗಾದರು.

ಆತಂಕದಲ್ಲಿದ್ದ ಅಧಿಕಾರಿಗಳಿಗೆ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಯ ಹೆಲಿಕಾಪ್ಟರ್ ಗುಲ್ಬರ್ಗಾ ರಸ್ತೆಯಲ್ಲಿರುವ ಶಾಸಕ ಮಾನಪ್ಪ ವಜ್ಜಲ್ ಅವರ ಹೆಲಿಪ್ಯಾಡ್ ನಲ್ಲಿ ಇಳಿದಿದೆ ಎನ್ನುವ ಮಾಹಿತಿ ತಿಳಿಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ಆದ ಹೆಲಿಪ್ಯಾಡ್ ನಲ್ಲಿ ಇಬ್ಬರು ಪಿಎಸ್ಸೈ ಮಾತ್ರ ಇದ್ದರು. ಹೆಲಿಕಾಪ್ಟರ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಳಿಯುತ್ತಿದ್ದಂತೆ ಬೆರಗಾದ ಪಿಎಸ್ಸೈಗಳು ಮುಖ್ಯಮಂತ್ರಿಯನ್ನು ಸ್ವಾಗತಿಸಿ, ಮದುವೆ ಸಮಾರಂಭಕ್ಕೆ ಕರೆದೊಯ್ದರು ಎಂದು ತಿಳಿದುಬಂದಿದೆ.

ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರವಾಗಿ ಈ ಬದಲಾವಣೆ, ಗೊಂದಲಕ್ಕೆ ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ.

Tags

HelicopterRaichuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X