Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಸತೀಶ್ ಜಾರಕಿಹೊಳಿ ನಿವಾಸದ...

Raichur | ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಈಡಿ ದಾಳಿ ಖಂಡಿಸಿ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ

ಅಮಿತ್ ಶಾ ಭಾವಚಿತ್ರ ದಹಿಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Sept 2026 10:37 PM IST
share
Raichur | ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಈಡಿ ದಾಳಿ ಖಂಡಿಸಿ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ

ರಾಯಚೂರು: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾನೂನು ಸಲಹೆಗಾರ ಹನುಮೇಶ ನಾಯಕ, ಈಡಿ ದಾಳಿಗಳು ಕೇವಲ ಕಾಂಗ್ರೆಸ್ ನಾಯಕರ ಮನೆಗಳ ಮೇಲೆಯೇ ನಡೆಯುತ್ತಿವೆ ಎಂದು ಆರೋಪಿಸಿದರು.

ಇದುವರೆಗೆ 196 ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ನಡೆಸಿ ತೊಂದರೆ ನೀಡಲಾಗಿದೆ. ಆದರೆ ದಾಳಿ ನಡೆದ ಪ್ರಕರಣಗಳಲ್ಲಿ ಆರೋಪ ಸಾಬೀತಾಗಿ ಶಿಕ್ಷೆಯಾಗಿರುವುದು ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ. ಇದರಿಂದ ದಾಳಿಗಳ ಉದ್ದೇಶ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸುವುದೇ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಸಿಬಿಐ, ಆದಾಯ ತೆರಿಗೆ ಇಲಾಖೆ (ಐಟಿ) ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದು, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಈ ಕ್ರಮಗಳು ನಡೆಯುತ್ತಿವೆ ಎಂದು ದೂರಿದರು.

ಸಚಿವ ಸತೀಶ್ ಜಾರಕಿಹೊಳಿ ಒಬ್ಬಂಟಿಯಲ್ಲ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಅವರ ಬೆಂಬಲಕ್ಕೆ ನಿಂತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಧೈರ್ಯ ತುಂಬಿದ್ದಾರೆ ಎಂದು ತಿಳಿಸಿದರು.

ಬಿಜೆಪಿಗೆ ಸಂವಿಧಾನ, ನೀತಿ ಹಾಗೂ ಕಾನೂನಿಗಿಂತ ವಿರೋಧ ಪಕ್ಷದ ನಾಯಕರನ್ನು ಬೆದರಿಸಿ ದುರ್ಬಲಗೊಳಿಸುವುದೇ ಉದ್ದೇಶವಾಗಿದೆ ಎಂದು ಹನುಮೇಶ ನಾಯಕ ಆರೋಪಿಸಿದರು.

ಪ್ರತಿಭಟನೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುಹಮ್ಮದ್ ಶಾಲಂ, ಕೆ.ಇ ಕುಮಾರ, ಸೈಯದ್ ನೂರುದ್ದೀನ್ ಹುಸೇನಿ, ಮುಹಮ್ಮದ್ ಶೋಯೆಬ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Satish JarkiholiED raidCongressRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X