Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: SIR ರದ್ದುಪಡಿಸಲು ಆಗ್ರಹಿಸಿ...

ರಾಯಚೂರು: SIR ರದ್ದುಪಡಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Oct 2026 6:32 PM IST
share
ರಾಯಚೂರು: SIR ರದ್ದುಪಡಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ರಾಯಚೂರು: ಎಸ್‌ಐಆರ್ ಪ್ರಕ್ರಿಯೆಯನ್ನು ಹಿಂಪಡೆಯಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಇಂಡಿಯಾ ಮೈತ್ರಿಕೂಟದ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ರಾಯಚೂರಿನ ನೇತಾಜಿನಗರದ ಶೆಟ್ಟಿಭಾವಿ ವೃತ್ತದಿಂದ‌ ಆರಂಭವಾದ ಮೆರವಣಿಗೆಯು ತೀನ್ ಕಂದೀಲ್ ವೃತ್ತ, ಸೂಪರ್ ಮಾರ್ಕೆಟ್, ಏಕ್ ಮಿನಾರ್ ಮಸ್ಜಿದ್, ಕೇಂದ್ರ ಬಸ್ ನಿಲ್ದಾಣದ ಮಾರ್ಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ವರೆಗೆ ಮೆರವಣಿಗೆ ನಡೆಯಿತು. ಪ್ರತಿಭಟನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮುಖವಾಡ ಧರಿಸಿ ಪ್ರಧಾನಿ ಮೋದಿ‌ ಮತ್ತು ಅಮಿತ್ ಶಾ ನಿಯಂತ್ರನ ಮಾಡುವಂತೆ ಅಣಕು ಪ್ರದರ್ಶನ ಮಾಡಿದರು.

ಇಂಡಿಯಾ ಮೈತ್ರಿಕೂಟ, ಮತ ಕಾವಲು ಸಮಿತಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮೈತ್ರಿಕೂಟದ ಬೆಂಬಲಿಗರು ಪಾಲ್ಗೊಂಡು ಮತದಾರರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿದರು.

ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಕೈಬಿಡುವ ಅಥವಾ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಮತ್ತು ಚುನಾವಣಾ ಆಯೋಗವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಎನ್ ಎಸ್ ಬೋಸರಾಜು ಮಾತನಾಡಿ, ಪಶ್ಚಿಮ ಬಂಗಾಳ, ಬಿಹಾರ ಸೇರಿ ಹಲವೆಡೆ ಬಿಜೆಪಿ ವೋಟ್ ಚೋರಿ ಮಾಡಿ ಅಧಿಕಾರಕ್ಕೆ ಬಂದಿದೆ. ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಜ್ಞಾನೇಶ್ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ವಸಂತ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ, ಮಾಜಿ ಪಾಲಿಕೆ ಸದಸ್ಯ ಜಯಣ್ಣ, ಶ್ರೀನಿವಾಸ್ ರೆಡ್ಡಿ, ಶ್ರೀದೇವಿ ನಾಯಕ, ವಿಶ್ವನಾಥ ಪಟ್ಟಿ, ಮಹಮ್ಮದ್ ಶಾಲಂ, ನರಸಿಂಹಲು ಮಾಡಗಿರಿ, ಕೆ.ಜಿ. ವಿರೇಶ್, ರಝಾಕ್ ಉಸ್ತಾದ್, ಮಾರೆಪ್ಪ ಹರವಿ, ಶ್ರೀದೇವಿ ನಾಯಕ, ಜಯಣ್ಣ, ಜಿ.ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಗಿರಿಯಪ್ಪ ನೆಲಹಾಳ, ನಿರ್ಮಲಾ ಬೆಣ್ಣೆ, ಆರತಿ, ಮಂಜುಳಾ‌ ಅಮರೇಶ, ರಝಿಯಾ ಸುಲ್ತಾನ, ಶಶಿಕಲಾ ಭೀಮಾರಾಯ ಮತ್ತಿತರರು ಇದ್ದರು.




Tags

RaichurCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X