Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಪ್ರವಾಸಿ ತಾಣಗಳ ಸಂರಕ್ಷಣೆ...

Raichur | ಪ್ರವಾಸಿ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಡಿಸಿ ಪೂವಿತಾ ಎಸ್.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Sept 2026 12:24 PM IST
share
Raichur | ಪ್ರವಾಸಿ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಡಿಸಿ ಪೂವಿತಾ ಎಸ್.

ರಾಯಚೂರು: ಜಿಲ್ಲೆಯ ಪ್ರವಾಸಿ ತಾಣಗಳನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರವಾಸೋದ್ಯಮವು ಒಂದು ಕಡೆ ದೇಶದ ಆರ್ಥಿಕತೆ ಹಾಗೂ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದರೆ, ಮತ್ತೊಂದು ಕಡೆ ನಮ್ಮ ಇತಿಹಾಸ ಮತ್ತು ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ಸೆ. 29ರಂದು ರಾಯಚೂರಿನ ಬಸ್ ನಿಲ್ದಾಣದ ಸಮೀಪದಲ್ಲಿರುವ ಮೆಕ್ಕಾ ದರ್ವಾಜ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ರಾಯಚೂರು ಮಹಾನಗರ ಪಾಲಿಕೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರವಾಸಿ ತಾಣಗಳ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡುವುದು ಹಾಗೂ ಪ್ರಾಕೃತಿಕ ಮತ್ತು ಐತಿಹಾಸಿಕ ತಾಣಗಳನ್ನು ಸಂರಕ್ಷಿಸುವುದು ಅತ್ಯಗತ್ಯವಾಗಿದೆ. ಕರ್ನಾಟಕವು ಪ್ರವಾಸೋದ್ಯಮದ ದೃಷ್ಟಿಯಿಂದ ಅತ್ಯಂತ ಶ್ರೀಮಂತ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ರಾಜ್ಯವಾಗಿದೆ ಎಂದರು.

ರಾಯಚೂರು ಜಿಲ್ಲೆಯು ಐತಿಹಾಸಿಕವಾಗಿಯೂ ಮಹತ್ವ ಹೊಂದಿದ್ದು, ಎರಡು ನದಿಗಳ ಮಧ್ಯದಲ್ಲಿರುವ ಸುಂದರ ಜಿಲ್ಲೆಯಾಗಿದೆ. ಮಸ್ಕಿಯಲ್ಲಿ ಅಶೋಕನ ಕಾಲದ ಐತಿಹಾಸಿಕ ತಾಣಗಳು ಸೇರಿದಂತೆ ಪ್ರವಾಸಿಗರು ಮೆಚ್ಚುವಂತಹ ಅನೇಕ ತಾಣಗಳು ಜಿಲ್ಲೆಯಲ್ಲಿವೆ. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ 38 ಪ್ರವಾಸಿ ತಾಣಗಳನ್ನು ಪ್ರಸಿದ್ಧಿಗೊಳಿಸುವ ಸಲುವಾಗಿ ಸೂಚನಾ ಫಲಕಗಳನ್ನು ಅಳವಡಿಸಲಾಗುತ್ತಿದೆ. ಪ್ರತಿ ತಿಂಗಳು ಸರ್ಕಾರಿ ನೌಕರರ ಸಂಘ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮಕ್ಕಳನ್ನು ಪ್ರವಾಸಿ ತಾಣಗಳಿಗೆ ಕರೆದುಕೊಂಡು ಹೋಗಿ ಅವುಗಳ ಪರಿಚಯ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.

ಈಕೋ ಟೂರಿಸಂ ಅನ್ನು ಉತ್ತೇಜಿಸುವ ಮೂಲಕ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಪ್ರವಾಸವನ್ನು ಆನಂದಿಸಬಹುದು. ಇದರ ಜೊತೆಗೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಹೊಸ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ಸಹಕಾರಿಯಾಗಲಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾಟಲಿ ಹಾಗೂ ಇತರ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಅವುಗಳನ್ನು ಜವಾಬ್ದಾರಿಯುತವಾಗಿ ಹಿಂತಿರುಗಿ ತಂದು ವಿಲೇವಾರಿ ಮಾಡುವ ಮೂಲಕ ‘ಜೀರೋ ವೇಸ್ಟ್ ಟ್ರೆಕ್ಕಿಂಗ್’ ಅನ್ನು ಉತ್ತೇಜಿಸಲಾಗುತ್ತಿದೆ ಎಂದರು.

ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಜೀರ್ ಅಹ್ಮದ್ ಕನವಳ್ಳಿ ಮಾತನಾಡಿ, ರಾಯಚೂರು ನಗರದಲ್ಲೇ ಇರುವ ಪಾಂಚೆ ಬಿಬಿ ಕುರಿತು ಅನೇಕರಿಗೆ ಸರಿಯಾದ ಮಾಹಿತಿ ಇಲ್ಲ. ಈ ಹಿನ್ನೆಲೆಯಲ್ಲಿ 100 ವಿದ್ಯಾರ್ಥಿಗಳಿಗೆ ಟ್ರೆಕ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ತಾಣದ ವೈಶಿಷ್ಟ್ಯಗಳನ್ನು ಅವರಿಗೆ ಪರಿಚಯಿಸಲಾಗುವುದು ಎಂದರು.

ಜಿಲ್ಲೆಯ 38 ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ಡಿಜಿಟಲ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಜಿಲ್ಲಾ ಕೇಂದ್ರದ ವಿವಿಧ ಪ್ರಮುಖ ಸ್ಥಳಗಳಾದ ಜಿಲ್ಲಾಧಿಕಾರಿ ಕಚೇರಿ, ಬಸ್ ನಿಲ್ದಾಣ, ನ್ಯಾಯಾಲಯ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಸ್ಥಳಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ. ಈ ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡಿದರೆ ಹೈಪರ್‌ಲಿಂಕ್ ಮೂಲಕ ಜಿಲ್ಲೆಯ 38 ಪ್ರವಾಸಿ ತಾಣಗಳ ಸಂಪೂರ್ಣ ವಿವರಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಎಐ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದ್ದು, ಇದು ಪ್ರವಾಸಿಗರಿಗೆ ಅನುಕೂಲವಾಗುವಂತೆ ಅವರ ಅಗತ್ಯಕ್ಕೆ ತಕ್ಕ ಕಸ್ಟಮೈಸ್‌ಡ್ ಇಟಿನರರಿ ಹಾಗೂ ಪ್ರಯಾಣದ ಯೋಜನೆಯನ್ನು ಸಿದ್ಧಪಡಿಸಿಕೊಡಲಿದೆ ಎಂದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಜೀವನದ ಪರಿವರ್ತನಾ ಹಂತದಲ್ಲಿದ್ದು, ಎಐ ಹಾಗೂ ಚಾಟ್‌ಜಿಪಿಟಿಯಂತಹ ಆಧುನಿಕ ತಂತ್ರಜ್ಞಾನಗಳನ್ನು ಜ್ಞಾನಾರ್ಜನೆಗಾಗಿ ಧನಾತ್ಮಕವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಈ ವೇಳೆ ಕೆಎಸ್‌ಟಿಡಿಸಿ ವತಿಯಿಂದ ತರಬೇತಿ ಪಡೆದ ಎರಡನೇ ಹಂತದ 20 ‘ಪ್ರವಾಸಿ ಮಿತ್ರ’ರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಬಳಿಕ ನಗರದ ಪಾಂಚೆ ಬಿಬಿ ಪ್ರದೇಶದಲ್ಲಿ ಟ್ರೆಕ್ಕಿಂಗ್ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶರಣಬಸವ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಕವಿತಾ, ಸಮಾಲೋಚಕರಾದ ಶ್ರೀನಾಥ್, ಆನಂದ, ಆಹಾರ ಇಲಾಖೆಯ ವ್ಯವಸ್ಥಾಪಕ ಜಿ. ಹರೀಶ್, ಆನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆಹಾರ ಇಲಾಖೆಯ ಶ್ರೀಹರಿ ಕಾರ್ಯಕ್ರಮ ನಿರ್ವಹಿಸಿದರು. ದಂಡಪ್ಪ ಬಿರಾದಾರ್ ವಂದಿಸಿದರು.

Tags

Poovitha S.Tourist PlacesRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X