Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕೇಂದ್ರ ಸರ್ಕಾರದ ವಿರುದ್ಧ...

Raichur | ಕೇಂದ್ರ ಸರ್ಕಾರದ ವಿರುದ್ಧ ಸಿಪಿಐ(ಎಂಎಲ್) ರೆಡ್ ಸ್ಟಾರ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ12 May 2026 10:34 PM IST
share
Raichur | ಕೇಂದ್ರ ಸರ್ಕಾರದ ವಿರುದ್ಧ ಸಿಪಿಐ(ಎಂಎಲ್) ರೆಡ್ ಸ್ಟಾರ್ ವಾಗ್ದಾಳಿ

ರಾಯಚೂರು: ಜನರ ಬೆವರಿನ ಹಣದಿಂದ ಅಧಿಕಾರ ನಡೆಸುವ ಪ್ರಧಾನಿ ಮೋದಿ, ಜನರನ್ನೇ ತ್ಯಾಗಕ್ಕೆ ಸಿದ್ಧರಾಗಿ ಎನ್ನುವ ಹಕ್ಕಿಲ್ಲ. ದೇಶದ ಸಂಪತ್ತು ಜನರದ್ದು, ಕಾರ್ಪೊರೇಟ್ ಕುಬೇರರದ್ದು ಅಲ್ಲ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ. ಗಂಗಾಧರ್ ಹೇಳಿದರು.

ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ದೇಶದ ಜನರನ್ನು ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಇಂದು ಜನರ ಕಷ್ಟಗಳಿಗೆ ಪರಿಹಾರ ನೀಡುವುದನ್ನು ಬಿಟ್ಟು ಜನರ ಬದುಕಿನ ಮೇಲೆಯೇ ಉಪದೇಶ ನೀಡುತ್ತಿರುವುದು ನಾಚಿಕೆಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ದರ ಹೆಚ್ಚಳ, ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಸಂಸ್ಥೆಗಳ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರವೇ ಕಾರಣವಾಗಿದೆ ಎಂದು ಆರೋಪಿಸಿದ ಅವರು, ಇದೇ ಸರ್ಕಾರ ಈಗ “ಪೆಟ್ರೋಲ್ ಕಡಿಮೆ ಬಳಸಿ”, “ಬಂಗಾರ ಖರೀದಿ ಮಾಡಬೇಡಿ”, “ಬಸ್-ರೈಲಿನಲ್ಲಿ ಸಂಚರಿಸಿ” ಎಂದು ಜನರಿಗೆ ಬೋಧನೆ ಮಾಡುತ್ತಿರುವುದು ಜನರ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದು ಟೀಕಿಸಿದರು.

ದೇಶದಲ್ಲಿ ರೈತರು ಸಾಲದ ಹೊರೆ ಹೊತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾರ್ಮಿಕರು ಕನಿಷ್ಠ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಮಧ್ಯಮ ವರ್ಗ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದೆ. ಆದರೆ ಕಾರ್ಪೊರೇಟ್ ಕಂಪನಿಗಳಿಗೆ ಮಾತ್ರ ಲಕ್ಷಾಂತರ ಕೋಟಿ ರೂಪಾಯಿ ಸೌಲಭ್ಯ ಹಾಗೂ ಸರ್ಕಾರಿ ಆಸ್ತಿಗಳನ್ನು ನೀಡಲಾಗುತ್ತಿದೆ ಎಂದು ದೂರಿದರು.

ಇದು ಜನರ ಸರ್ಕಾರವಲ್ಲ, ಕಾರ್ಪೊರೇಟ್ ಪರ ಸರ್ಕಾರವಾಗಿದೆ. ಜನರ ಬದುಕನ್ನು ಹಾಳು ಮಾಡುವ ಫ್ಯಾಸಿಸ್ಟ್ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಯುವಕರು ಮತ್ತು ಮಹಿಳೆಯರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಅವರು ಕರೆ ನೀಡಿದರು.

ಇಂಧನ ದರ ಏರಿಕೆಯನ್ನು ಹಿಂಪಡೆಯಬೇಕು, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಸಾರ್ವಜನಿಕ ವಲಯದ ಖಾಸಗೀಕರಣ ನಿಲ್ಲಿಸಬೇಕು ಹಾಗೂ ಉದ್ಯೋಗ, ಶಿಕ್ಷಣ, ಆರೋಗ್ಯ ಮತ್ತು ಆಹಾರವನ್ನು ಜನರ ಹಕ್ಕಾಗಿ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X