ರಾಯಚೂರು | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ನಿರ್ಧಾರ

ನಿತೀಶ್ ಕೆ.
ರಾಯಚೂರು : ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಾಲ್ನಂತೆ ಗರಿಷ್ಟ 150 ಕ್ವಿಂಟಾಲ್ ಬಿಳಿಜೋಳ ಖರೀದಿಸಲು ನಿರ್ಧಾರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ ನಿಗದಿಪಡಿಸಿದ್ದ 10 ಕ್ವಿಂಟಾಲ್ ಬದಲಾಗಿ ರೈತರು ಬೆಳೆದಿರುವ ಬಿಳಿಜೋಳದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 20 ಕ್ವಿಂಟಾಲ್ನಂತೆ ಗರಿಷ್ಟ 150 ಕ್ವಿಂಟಾಲ್ ಬಿಳಿಜೋಳವನ್ನು ಎಫ್.ಐ.ಡಿ ಪ್ರಕಾರ ಖರೀದಿಸಲು ಆದೇಶಿಸಲಾಗಿದ್ದು, ರೈತಬಾಂಧವರು ತಮ್ಮ ಹತ್ತಿರದಲ್ಲಿರುವ ನೋಂದಣಿ ಹಾಗೂ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಿತಿಶ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





