Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕೃಷಿ ಪಂಪ್‌ಸೆಟ್‌ಗಳಿಗೆ...

Raichur | ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಆಗ್ರಹ

ಜೆಸ್ಕಾಂ ಅಧಿಕಾರಿಗಳ ಕಾಲಿಗೆ ಬಿದ್ದು ರೈತರಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ24 Sept 2026 8:34 PM IST
share
Raichur | ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಆಗ್ರಹ

ರಾಯಚೂರು: ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ರೈತರು ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಧಿಕಾರಿಗಳ ಕಾಲಿಗೆ ಬಿದ್ದು 12 ಗಂಟೆ ನಿರಂತರ ವಿದ್ಯುತ್ ನೀಡುವಂತೆ ಮನವಿ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ.

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿದ ರೈತರು, ಪದೇಪದೇ ವಿದ್ಯುತ್ ಕಡಿತದಿಂದ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದ 110 ಕೆವಿ ಉಪಕೇಂದ್ರದ ಬಳಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಧರಣಿ ನಡೆಸಿ, ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ 12 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಯಚೂರಿನಲ್ಲಿಯೇ ಆರ್‌ಟಿಪಿಎಸ್ ಮೂಲಕ ವಿದ್ಯುತ್ ಉತ್ಪಾದಿಸಿ ರಾಜ್ಯದ ಹಲವು ಭಾಗಗಳಿಗೆ ಪೂರೈಕೆ ಮಾಡಲಾಗುತ್ತಿದ್ದರೂ, ಸ್ಥಳೀಯ ರೈತರಿಗೆ ಸಮರ್ಪಕ ವಿದ್ಯುತ್ ಸಿಗದಿರುವುದು ವಿಪರ್ಯಾಸವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ರೈತರಿಗೆ 12 ಗಂಟೆ ಹಾಗೂ ಗೃಹಬಳಕೆದಾರರಿಗೆ 24x7 ವಿದ್ಯುತ್ ನೀಡುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ವಾಸ್ತವದಲ್ಲಿ ದಿನಕ್ಕೆ ಎರಡು–ಮೂರು ಗಂಟೆಯೂ ಸಮರ್ಪಕ ವಿದ್ಯುತ್ ದೊರೆಯುತ್ತಿಲ್ಲ. ಗಾಳಿ, ಮಳೆ ಬಂದಾಗ ವಿದ್ಯುತ್ ಪೂರೈಕೆ ಸಂಪೂರ್ಣ ಅಸ್ತವ್ಯಸ್ತವಾಗುತ್ತಿದ್ದು, ಕೆಲವೊಮ್ಮೆ ದಿನಗಟ್ಟಲೆ ವಿದ್ಯುತ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ರೈತರು ಆರೋಪಿಸಿದರು.

ಬರದಿಂದ ಈಗಾಗಲೇ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಕೊರತೆಯಿಂದ ಉಳಿದಿರುವ ಬೆಳೆಗಳನ್ನೂ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಕನಿಷ್ಠ 12 ಗಂಟೆ ನಿರಂತರ ವಿದ್ಯುತ್ ನೀಡಿದರೆ ಮಾತ್ರ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ರೈತರು ಹೇಳಿದರು.

ಪ್ರತಿಭಟನೆ ಬಳಿಕ ರೈತರು ಎಇಇ ಹಾಗೂ ಇಇ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.

ಮಾಹಿತಿ ಹಕ್ಕು ವೇದಿಕೆಯ ಜಿಲ್ಲಾ ಅಧ್ಯಕ್ಷ ಈರಣ್ಣ ಮಾತನಾಡಿ, ರೈತರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಹಾಗೂ ಜೆಸ್ಕಾಂ ಪಾಲಿಸಬೇಕು. ಸಮರ್ಪಕ ವಿದ್ಯುತ್ ಪೂರೈಕೆಯಾಗದಿದ್ದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.

ಜಿಲ್ಲಾ ಅಧ್ಯಕ್ಷ ವಸಂತ್ ರೆಡ್ಡಿ ಮಾತನಾಡಿ, ವಿದ್ಯುತ್ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಹಾಗೂ ಕೆಇಬಿ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಉಮೇಶ್ ಗೌಡ, ರಜನಿಕಾಂತ್ ರೆಡ್ಡಿ, ಮಲ್ಲೇಶ್, ಕೃಷ್ಣ ನಾಯಕ್, ಈರಣ್ಣ, ಜೆಸಿಬಿ ಮಲ್ಲಪ್ಪ, ಜಿಂದಪ್ಪ ಬಳೆಗಾರ, ರಘುಪತಿ ರೆಡ್ಡಿ, ಪ್ರಕಾಶ್, ಹುಸೇನಪ್ಪ ಗೌಡ, ಉಮೇಶ್, ಕಳವಲದೊಡ್ಡಿ ಬಿ. ಅನಿಲ್ ಕುಮಾರ್, ಕೆ. ಅಂಜನೇಯ, ಶರಣಪ್ಪ ಗೌಡ್ರು ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

Tags

power supplyRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X