Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಎನ್.ಎಸ್.ಬೋಸರಾಜುಗೆ ಸಚಿವ...

Raichur | ಎನ್.ಎಸ್.ಬೋಸರಾಜುಗೆ ಸಚಿವ ಸ್ಥಾನ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Jun 2026 8:11 PM IST
share
Raichur | ಎನ್.ಎಸ್.ಬೋಸರಾಜುಗೆ ಸಚಿವ ಸ್ಥಾನ ನೀಡಲು ಒತ್ತಾಯ

ರಾಯಚೂರು: ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಜಯಣ್ಣ ಒತ್ತಾಯಿಸಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಜಿಲ್ಲೆಗೆ ಸೂಕ್ತ ಪ್ರತಿನಿಧಿತ್ವ ನೀಡಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹಿರಿಯ ನಾಯಕ ಎನ್.ಎಸ್. ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳ ಆಡಳಿತ ಅವಧಿಯಲ್ಲಿ ಬೋಸರಾಜು ಅವರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅವರ ಸಹಕಾರದೊಂದಿಗೆ ರಸ್ತೆ ಅಭಿವೃದ್ಧಿ, ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವುದು ಹಾಗೂ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡುವುದು ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಂದಿನ ಅವಧಿಯಲ್ಲೂ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಮಣ್ಣ ಇರಬಗೇರಾ, ಜಿಲ್ಲೆಯ ಪ್ರಭಾವಿ ನಾಯಕ ಎನ್.ಎಸ್. ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡುವುದರ ಜೊತೆಗೆ ರಾಜ್ಯದ ಮೂಲ ಮಾದಿಗ ಸಮಾಜದ ಶಾಸಕರಿಗೂ ಸಚಿವ ಸಂಪುಟದಲ್ಲಿ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾದಿಗ ಸಮಾಜದ ಮುಖಂಡರಾದ ಎಚ್.ಬಿ. ಮುರಾರಿ, ಚಂದ್ರಶೇಖರ ಕುರ್ಡಿ, ನರಸಿಂಹಲು ಮಾಡಗಿರಿ, ನರಸಮ್ಮ ಮಾಡಗಿರಿ, ಮಹಾದೇವಿ ಬೂದೆಪ್ಪ, ಎಂ. ಪವನ ಕುಮಾರ, ಮರಿಸ್ವಾಮಿ, ಈರಣ್ಣ ಬಂಡಾರಿ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X