Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನಕಲಿ ವೈದ್ಯರು, ಆಸ್ಪತ್ರೆಗಳ...

Raichur | ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 July 2026 9:50 PM IST
share
Raichur | ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ರಾಯಚೂರು: ಜಿಲ್ಲೆಯಲ್ಲಿ ಕೆಪಿಎಮ್‌ಇ ಕಾಯ್ದೆಯಡಿ ನೋಂದಾಯಿಸದ ಅಥವಾ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ನಕಲಿ ವೈದ್ಯರು, ಆಸ್ಪತ್ರೆಗಳು ಹಾಗೂ ವ್ಯಸನ ಮುಕ್ತಿ ಕೇಂದ್ರಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕೆಪಿಎಮ್‌ಇ ಕಾಯ್ದೆ ಅನುಷ್ಠಾನ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ, ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ವೈದ್ಯಕೀಯ ಪದವಿ ಇಲ್ಲದೇ ಚಿಕಿತ್ಸೆ ನೀಡುತ್ತಿರುವವರನ್ನು ಗುರುತಿಸಿ, ಕೆಪಿಎಮ್‌ಇ ಕಾಯ್ದೆ-2007ರಡಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೆಪಿಎಮ್‌ಇ ಅನುಮತಿ ಪಡೆಯದೆ ಮೆಡಿಕಲ್ ಅಂಗಡಿಗಳ ಒಳಭಾಗ ಅಥವಾ ಪಕ್ಕದಲ್ಲಿ ಕ್ಲಿನಿಕ್ ನಡೆಸುತ್ತಿರುವ ಪ್ರಕರಣಗಳನ್ನು ಪರಿಶೀಲಿಸಬೇಕು. ನೋಂದಾಯಿತ ವೈದ್ಯರ ಹೆಸರಿನಲ್ಲಿ ಕ್ಲಿನಿಕ್ ಇಲ್ಲದಿದ್ದರೆ ಅಂತಹ ಮೆಡಿಕಲ್ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹಾಯಕ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಿದರು.

ಆರು ತಿಂಗಳಲ್ಲಿ 20 ನಕಲಿ ವೈದ್ಯರ ವಿರುದ್ಧ ಕ್ರಮ :

ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 20 ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡು ಅವರ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ. ಅಲ್ಲದೆ 2.20 ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವಿಜಯಶಂಕರ, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ. ಶಿವಕುಮಾರ್ ನಾರಾ, ಸಹಾಯಕ ಔಷಧ ನಿಯಂತ್ರಕ ಸಚಿನ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಶಂಕರಗೌಡ, ಐಎಂಎ ಅಧ್ಯಕ್ಷ ಡಾ. ಶೈಲೇಶ್ ಅಮರಕೇಡ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags

hospitalsRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X