Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನಗರದ ವಿವಿಧ ವಾರ್ಡ್‌ಗಳಿಗೆ...

Raichur | ನಗರದ ವಿವಿಧ ವಾರ್ಡ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ1 Sept 2026 9:59 PM IST
share
Raichur | ನಗರದ ವಿವಿಧ ವಾರ್ಡ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ರಾಯಚೂರು : ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹೊಪಾತ್ರ ಅವರು ನಗರದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಾರ್ಡ್ 19 ಹಾಗೂ 20ರಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ನೂತನ ಓವರ್‌ಹೆಡ್ ವಾಟರ್ ಟ್ಯಾಂಕ್ ನಿರ್ಮಾಣ ಹಾಗೂ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಕಾಮಗಾರಿಗಳ ಪ್ರಸ್ತುತ ಸ್ಥಿತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಗರದ ನಾಗರಿಕರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛತೆ, ನೈರ್ಮಲ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಅಭಿವೃದ್ಧಿ ಕಾಮಗಾರಿಗಳು ನಿಗದಿತ ತಾಂತ್ರಿಕ ಹಾಗೂ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಯ ಸೇವೆಯನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು. ಸಾರ್ವಜನಿಕ ಆರೋಗ್ಯ ಹಾಗೂ ಸ್ವಚ್ಛ ನಗರ ಪರಿಸರ ನಿರ್ಮಾಣದಲ್ಲಿ ಅವರ ಸೇವೆ ಮಹತ್ವದ್ದಾಗಿದೆ ಎಂದು ಹೇಳಿದರು.

ರಾಯಚೂರು ನಗರದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಸಂಬಂಧಪಟ್ಟ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಅಗತ್ಯ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಜೋನಲ್-1 ಆಯುಕ್ತ ಮಲ್ಲಿಕಾರ್ಜುನ, ಪರಿಸರ ವಿಭಾಗದ ಕಾರ್ಯಪಾಲಕ ಅಭಿಯಂತರ ಜೈಪಾಲರೆಡ್ಡಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X