ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ನಾಯಕ ಸಂಚರಿಸುತ್ತಿದ್ದ ಕಾರು ಅಫಘಾತ, ಆಸ್ಪತ್ರೆಗೆ ದಾಖಲು

ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ ನಾಯಕ ಅವರ ಕಾರು ರವಿವಾರ ಬೆಳಿಗ್ಗೆ ಅಪಘಾತಕ್ಕೀಡಾಗಿದ್ದು ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಗುರಗುಂಟಾ ಪಟ್ಟಣದಲ್ಲಿ ನಡೆದಿದೆ. ಸಣ್ಣಪುಟ್ಟ ಗಾಯಗಳಾಗಿರುವುದರಿಂದ ಈಗ ಅವರು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರೆಮ್ಮಾ ನಾಯಕ ಅವರಿಗೆ ಸೇರಿದ್ದು ಎನ್ನಲಾದ ಮೂರು ಕಾರುಗಳ ಜೊತೆ ದೇವದುರ್ಗದಿಂದ ಹುಬ್ಬಳ್ಳಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ. ಮೂರು ಕಾರುಗಳ ಪೈಕಿ ಕರೆಮ್ಮಾ ಅವರು ನಡುವಿನ ಕಾರಿನಲ್ಲಿದ್ದರು, ಮುಂದಿನ ಕಾರಿಗೆ ನಾಯಿಅಡ್ಡ ಬಂದ ಕಾರಣ ರಕ್ಷಣೆ ಮಾಡಲು ಹೋಗಿ ಬ್ರೇಕ್ ಹಾಕಿದಾಗ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ನಿಯಂತ್ರಣ ಕಳೆದುಕೊಂಡು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ಬಳಿಕ ಸ್ಥಳೀಯ ಶಾಸಕ ಮಾನಪ್ಪ ವಜ್ಜಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
Next Story





