Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ದಲಿತರ ಮೇಲಿನ ದೌರ್ಜನ್ಯ...

Raichur | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲು ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Sept 2026 6:51 PM IST
share
Raichur | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲು ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನೆ

ರಾಯಚೂರು : ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ (DHS) ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ಟಿಪ್ಪು ಸುಲ್ತಾನ್ ಗಾರ್ಡನ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಕೊಲೆ ಪ್ರಕರಣ, ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರೇಣಮ್ಮ ಕೊಲೆ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಲಾಯಿತು.

ಪ್ರಕರಣಗಳ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಕ್ರಮ ಕೈಗೊಂಡು ತ್ವರಿತ ವಿಚಾರಣೆ ನಡೆಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಜಿಲ್ಲಾ ಕೇಂದ್ರಗಳಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂತ್ರಸ್ತ ಕುಟುಂಬಗಳಿಗೆ ತಲಾ 50 ಲಕ್ಷ ರೂ. ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಅಥವಾ 5 ಎಕರೆ ಕೃಷಿ ಭೂಮಿ ನೀಡಬೇಕು. ಡಿಸಿಆರ್‌ಇ ಪೊಲೀಸ್ ಠಾಣೆಯನ್ನು ಬಲಪಡಿಸಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಸಿಂಧನೂರು ತಾಲೂಕಿನ ವೀರಾಪುರ ಗ್ರಾಮದ ದಲಿತರಿಗೆ ಭೂ ಒಡೆತನ ಯೋಜನೆಯಡಿ ಮಂಜೂರಾದ ಜಮೀನುಗಳ ಪಹಣಿಯನ್ನು ಫಲಾನುಭವಿಗಳ ಹೆಸರಿಗೆ ಮಾಡಬೇಕು. ಸರ್ವೆ ನಂ.184ರ 9 ಎಕರೆ 7 ಗುಂಟೆ ಜಮೀನು ಹಾಗೂ ಸರ್ವೆ ನಂ.118ರಲ್ಲಿ 1982ರಲ್ಲಿ ಮಂಜೂರಾದ ಜಮೀನಿನ ಪಟ್ಟಾ ಮತ್ತು ಪಹಣಿಯಲ್ಲಿ ಫಲಾನುಭವಿಗಳ ಹೆಸರು ದಾಖಲಿಸುವಂತೆ ಆಗ್ರಹಿಸಿದರು.

ದಲಿತರು ಹಾಗೂ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹೆಚ್. ಪದ್ಮಾ, ಕೆ.ಜಿ. ವೀರೇಶ, ಅಪ್ಪಣ್ಣ ಕಾಂಬಳೆ, ಬಸವಂತರಾಯ ಗೌಡ, ವೀರನಗೌಡ, ಕರಿಯಪ್ಪ ಅಚ್ಚೋಳಿ, ಕರಿಯಮ್ಮ ವೀರಾಪುರ, ಹುಸೇನಪ್ಪ ದಡೆಸೂಗೂರು, ನರಸಿಂಹಲು ವಡವಾಟಿ, ತಿಮ್ಮಲಮ್ಮ ಬೋಳಬಂಡಿ, ನರಸಮ್ಮ ವಡವಾಟಿ, ಪಿ. ಯಲ್ಲಮ್ಮ, ಮಹಾದೇವಿ, ಜಮಲಮ್ಮ, ಶೇಖಮ್ಮ, ಹುಲಿಗೆಮ್ಮ, ಉತ್ತಮ್ಮ, ಸರೋಜಮ್ಮ, ನರಸಪ್ಪ, ಆನಂದ, ಶ್ರೀನಿವಾಸ, ಗಂಗಮ್ಮ, ದೇವಕಮ್ಮ, ತಾಯಮ್ಮ, ತಿಪ್ಪಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

protestRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X