ರಾಯಚೂರು | ಜಮೀನು ಮಾರಾಟ ವಿಚಾರಕ್ಕೆ ಸಂಬಂಧಿಸಿ ವಿವಾದ : ಪತ್ನಿಯನ್ನು ಕೊಂದ ಪತಿ

ಸಾಂದರ್ಭಿಕ ಚಿತ್ರ
ಸಿರವಾರ : ಬೊಮ್ಮನಾಳ ಗ್ರಾಮದಲ್ಲಿ ಜಮೀನು ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿ ನಡೆದ ವಾಗ್ವಾದ ತಾರಕಕ್ಕೇರಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಬಸ್ಸಮ್ಮ ಕೊಲೆಯಾದ ಮಹಿಳೆ. ಬಸ್ಸಮ್ಮ ಪತಿ ಬಸವಂತರಾಯ 10 ಎಕರೆ ಜಮೀನು ಹೊಂದಿದ್ದು, ಲಕ್ಷಾಂತರ ರೂ. ಸಾಲ ಮಾಡಿದ್ದ. ಅದನ್ನು ತೀರಿಸಲು 1 ಎಕರೆ ಜಮೀನು ಮಾರಾಟ ಮಾಡಲು ಮುಂದಾಗಿದ್ದ. ಆದರೆ ಪತ್ನಿ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾಳೆ. ಇದೇ ಕಾರಣಕ್ಕೆ ಪತಿ-ಪತ್ನಿ ನಡೆವೆ ವಾಗ್ವಾದ ನಡೆದು ಬಸವಂತರಾಯ ಒನಕೆ ಮತ್ತು ಪೈಪ್ನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿದ್ದ ಬಸ್ಸಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿ ಆರೋಪಿ ಬಸವಂತರಾಯನನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





