ರಾಯಚೂರು | ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ, ಜಾಥಾ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಯಿತು.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಪವನ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ ಕಾಂದೂ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ನಾಗೇಂದ್ರ ಮಠಮಾರಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಜಾಥಾವು ಬಸವೇಶ್ವರ ವೃತ್ತ, ಚಂದ್ರಮೌಳೇಶ್ವರ ವೃತ್ತ, ತೀನ್ ಕಂದಿಲ್ ವೃತ್ತ, ತಹಶೀಲ್ದಾರ್ ಕಚೇರಿ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಗರದ ಶ್ರೀ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಸಮಾಪ್ತಿಯಾಗಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾಧಿಕಾರಿ ನಿತೀಶ್ ಕೆ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಸುಭಾಷ್ ಚಂದ್ರ ಅವರು ವಿಶೇಷ ಉಪನ್ಯಾಸ ನೀಡಿದರು. ಜಾನ್‌ವೆಸ್ಲಿ ಟಿ ಕಾತರಕಿ ಅವರು ಡಾ.ಬಿ.ಆರ್.ಅಂಬೇಡ್ಕರ್ ವೇಷ ಧರಿಸಿ ಗಮನ ಸೆಳೆದರು. ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷರು ಹಾಗೂ ಕಲಾವಿದರಾದ ಪರಶುರಾಮ ಅರೋಲಿ ಅವರು ಕಾರ್ಯಕ್ರಮದಲ್ಲಿ ಪ್ರಾರ್ಥಿಸಿ, ಅಂಬೇಡ್ಕರ್ ಗೀತೆಗಳ ಗಾಯನ ನಡೆಸಿಕೊಟ್ಟರು.
ಈ ವೇಳೆ ವಿವಿಧ ಸಂಘಟನೆಗಳ ಮುಖಂಡರಾದ ಕೆ.ಇ.ಕುಮಾರ, ಎಂ.ಆರ್.ಭೇರಿ, ಅನಿತಾ ನವಲಕಲ್, ನಿವೇದಿತಾ ಎನ್, ವಿಶ್ವನಾಥ ಪಟ್ಟಿ, ಬಸವರಾಜ ಸಾಸಲಮರಿ, ಗಿರಿಯಪ್ಪ ನೆಲಹಾಳ, ಕರುಣಕುಮಾರ ಕಟ್ಟಿಮನಿ, ಪಿ.ಪ್ರಭಾಕರ, ಪ್ರಾಣೇಶ ಮಂಚಾಳ, ರವಿ ದಾದಸ, ಎಂ.ವೆಂಕಟೇಶ ಅರೋಲಿಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧೂ ರಘು ಹೆಚ್.ಎಸ್., ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಜಲ್ದಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಮಾನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.







