Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜಿಲ್ಲಾಡಳಿತದಿಂದ...

ರಾಯಚೂರು | ಜಿಲ್ಲಾಡಳಿತದಿಂದ ಪ್ರಜಾಪ್ರಭುತ್ವ ದಿನ ಆಚರಣೆ

ವಾರ್ತಾಭಾರತಿವಾರ್ತಾಭಾರತಿ15 Sept 2025 8:03 PM IST
share
ರಾಯಚೂರು | ಜಿಲ್ಲಾಡಳಿತದಿಂದ ಪ್ರಜಾಪ್ರಭುತ್ವ ದಿನ ಆಚರಣೆ
ಸೈಕಲ್ ಜಾಥಾದಿಂದ ಜನ ಜಾಗೃತಿ, ನಾನಾ ಸ್ಪರ್ಧೆಗಳಿಗೆ ವಿದ್ಯುಕ್ತ್ ಚಾಲನೆ

ರಾಯಚೂರು : ಸೈಕಲ್ ಜಾಥಾ, ಸಂವಿಧಾನ ಪೀಠಿಕೆ ವಾಚನ, ವಿವಿಧ ಸ್ಪರ್ಧೆಗಳಿಗೆ ಚಾಲನೆ ಸೇರಿದಂತೆ ನಾನಾ ಕಾರ್ಯಕ್ರಮಗಳ ಮೂಲಕ ಸೆ.15ರಂದು ಜಿಲ್ಲಾಡಳಿತದಿಂದ ರಾಯಚೂರು ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪೂರ್ವ ನಿಗದಿಯಂತೆ ಬೆಳ್ಳಂಬೆಳಗ್ಗೆ 7 ಗಂಟೆ ಹೊತ್ತಿಗೆ ಯಕ್ಲಾಸಪುರ ಬಳಿಯ ನೂತನ ಜಿಲ್ಲಾಡಳಿತ ಭವನದಿಂದ ಬೈಕ್ ರ‍್ಯಾಲಿ ಆಯೋಜನೆ ಮಾಡಲಾಗಿತ್ತು.

‘ನನ್ನ ಮತ ನನ್ನ ಹಕ್ಕು’ ಎಂಬ ಧ್ಯೇಯ ವಾಕ್ಯದೊಂದಿಗೆ ಮಹತ್ವದ ಆಶಯದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಯಾಗಿದ್ದ ಸೈಕಲ್ ರ‍್ಯಾಲಿಯಲ್ಲಿ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಸೇರಿದಂತೆ ಹಲವಾರು ವರ್ಗದ ಜನರು ಭಾಗಿಯಾಗಿ ರ‍್ಯಾಲಿಗೆ ಮೆರುಗು ತಂದರು.

ನಿತ್ಯ ಒಂದಿಲ್ಲೊಂದು ಒತ್ತಡದಲ್ಲಿರುವ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸಹ ಸೈಕಲ್ ರ‍್ಯಾಲಿಯಲ್ಲಿ ಭಾಗಿಯಾಗಿ ಗಮನ ಸೆಳೆದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿಂಧು ರಘು ಹೆಚ್ ಎಸ್. ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಜಲ್ದಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ರ‍್ಯಾಲಿಯು ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ಸೇರಿತು.

ಬೆಳಗ್ಗೆ ಬಿಸಲೇರುವ ಹೊತ್ತಿಗೆ ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿತು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಂವಿಧಾನ ಪೀಠಿಕೆ ಬೋಧನೆ ಮತ್ತು ವಿವಿಧ ಸ್ಪರ್ಧೆಗಳ ಚಾಲನಾ ಕಾರ್ಯಕ್ರಮವು ಅಚ್ಚುಕಟ್ಟಾಗಿ ಏರ್ಪಾಡಾಗಿತ್ತು.

ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷರಾದ ಬಶೀರ್ ಅಹ್ಮದ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಎರಡನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಭಾಗಿಯಾಗಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಸಂವಿಧಾನ ಪೀಠಿಕೆ ಬೋಧಿಸಿದ ಜಿಲ್ಲಾಧಿಕಾರಿಗಳು:

ಕಾರ್ಯಕ್ರಮದ ಆರಂಭದಲ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಭಾರತ ಸಂವಿಧಾನದ ಪೂರ್ವ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲ ಗಣ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿ ಯುವಜನರು ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿದರು. ಇದೆ ವೇಳೆ, ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರ ಇವರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ, ಶಾಸಕರಾದ ಬಸನಗೌಡ ದದ್ದಲ್ ಅವರು ಚಾಲನೆ ನೀಡಿದರು.

ಈ ವೇಳೆ ಶಾಸಕರು ಮಾತನಾಡಿ, ಪ್ರಜಾಪ್ರಭುತ್ವದ ಮಹತ್ವದ ಸಂದೇಶ ಸಾರುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಸಲಾಗುತ್ತಿದೆ. ಸಂವಿಧಾನದ ಆಶಯದಂತೆ ನಾವೆಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು ರಘು ಹೆಚ್ ಎಸ್., ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಜಲ್ದಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಮತದಾರ ಸಾಕ್ಷರತಾ ಕ್ಲಬ್‌ನ ನೋಡಲ್ ಅಧಿಕಾರಿಗಳಾದ ಡಾ.ದಂಡಪ್ಪ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಈರೇಶ್ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ವ್ಯವಸ್ಥಾಪಕರಾದ ರವಿ ಸೇರಿದಂತೆ ವಿವಿಧ ವಸತಿ ನಿಲಯಗಳ ನಿಲಯಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X