Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜಿಲ್ಲಾಡಳಿತದಿಂದ...

ರಾಯಚೂರು | ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಆರಂಭ

ವಾರ್ತಾಭಾರತಿವಾರ್ತಾಭಾರತಿ23 Nov 2025 9:06 PM IST
share
ರಾಯಚೂರು | ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಆರಂಭ

ರಾಯಚೂರು : ರಾಯಚೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲಾಡಳಿತವು ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಉಚಿತ ತರಬೇತಿಯ ತರಗತಿಗಳು ಯಶಸ್ವಿಯಾಗಿ ಆರಂಭವಾದವು.

ತರಬೇತಿಯ ಮೊದಲ ದಿನವಾದ ನವೆಂಬರ್ 22ರಂದು ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು, ತರಬೇತಿಗೆ ಆಯ್ಕೆಯಾದ 120 ವಿದ್ಯಾರ್ಥಿಗಳೊಂದಿಗೆ ನೇರ ಸಂವಹನ ನಡೆಸಿದರು.

ರಾಯಚೂರು ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಗಜಾನನ ಬಾಳೆ, ತರಬೇತಿಯ ಅವಧಿ, ತರಬೇತಿಯ ಪಾಠಗಳು, ತರಬೇತಿಯ ಪ್ರತಿದಿನದ ಸಮಯ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚಿಸಿದರು.

ಈ ವೇಳೆ ತರಬೇತಿಯ ನೋಡಲ್ ಅಧಿಕಾರಿಗಳು ಆಗಿರುವ ತಹಶೀಲ್ದಾರರಾದ ಸುರೇಶ ವರ್ಮಾ, ಅಮರೇಶ್‌ ಬಿರಾದಾರ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಪ್ರವೀಣ್‌ ಕುಮಾರ್‌, ಜಿಲ್ಲಾ ಗ್ರಂಥಾಲಯ ಇಲಾಖೆಯ ಅಧಿಕಾರಿಗಳಾದ ಡಾ.ಕಲಾಲ್‌, ನಿರ್ಮಲಾ ಹೆಚ್ ಹೊಸೂರ್‌, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಈರೇಶ್ ನಾಯಕ, ಆಹಾರ ಇಲಾಖೆಯ ಅಧಿಕಾರಿ ನಝೀರ್ ಅಹ್ಮದ್, ಹಟ್ಟಿ ಚಿನ್ನದ ಗಣಿ ಕಂಪೆನಿಯ ಉಪ ಪ್ರಧಾನ ವ್ಯವಸ್ಥಾಪಕರು ಹಾಗೂ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಕೃಷ್ಣ ಶಾವಂತಗೇರಿ, ಸ್ಥಳೀಯ ಲೆಕ್ಕ ಪರಿಶೋಧನಾ ಇಲಾಖೆಯ ಚಂದಪ್ಪ, ಅರಣ್ಯ ಇಲಾಖೆಯ ಮಹೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಮಾತನಾಡಿ, ಪ್ರತಿಭೆಯು ಪ್ರತಿಯೊಬ್ಬರಲ್ಲೂ ಇರುತ್ತದೆ. ಪರಿಸರ ಮತ್ತು ಪ್ರಯತ್ನದಿಂದ ಗುರಿ ಸಾಧನೆ, ಯಶಸ್ಸು ಸಾಧ್ಯವಾಗುತ್ತದೆ. ರಾಯಚೂರು ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ, ಬೀದರ, ಬಳ್ಳಾರಿ, ವಿಜಯನಗರ, ಕೊಪ್ಪಳ ಭಾಗದ ವಿದ್ಯಾರ್ಥಿಗಳು ಯಾವುದೇ ಸಾಧನೆಯಲ್ಲಿ ಹಿಂದೆ ಉಳಿದಿಲ್ಲ. ಬಡತನ, ತಿಳಿವಳಿಕೆ ಕೊರತೆಯಿಂದ ಹಿಂದೆ ಬೀಳುವ ರಾಯಚೂರು ಸೇರಿದಂತೆ ರಾಜ್ಯದ ಯಾವುದೇ ಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಪರಿಸರ ಮೂಡಿಸುವ ನಿಟ್ಟಿನಲ್ಲಿ ರಾಯಚೂರು ಜಿಲ್ಲಾಡಳಿತವು ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಬಾವಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಈ ತರಬೇತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ರಾಯಚೂರು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆಯೋಜನೆ ಮಾಡಿರುವ ಈ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಕಾರ್ಯಕ್ರಮವನ್ನು ರಾಯಚೂರು ಜಿಲ್ಲಾಡಳಿತವು ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಸಹಯೋಗದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಿದೆ. ಈ ಕಾರ್ಯಕ್ರಮಕ್ಕಾಗಿ ಜಿಲ್ಲಾಧಿಕಾರಿಗಳು ವಿಶೇಷ ಕಾಳಜಿ ವಹಿಸಿ ನಾನಾ ಸಮಿತಿಗಳನ್ನು ರಚಿಸಿ ಹಲವು ದಿನಗಳಿಂದ ಮಾರ್ಗದರ್ಶನ ಮಾಡಿದ್ದಾರೆ. ತಹಶೀಲ್ದಾರ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ತಯಾರಿಸುವುದು, ಪಾರದರ್ಶಕವಾಗಿ ಪರೀಕ್ಷೆ ನಡೆಸುವುದು, ತರಬೇತಿಗಳ ಹಾಲ್ ಸಿದ್ಧಪಡಿಸುವುದು ಸೇರಿದಂತೆ ಹತ್ತಾರು ಮಹತ್ವದ ಕಾರ್ಯಗಳನ್ನು ತಿಂಗಳುಗಟ್ಟಲೇ ನಿರಂತರ ನಡೆಸಿ ಶ್ರಮಿಸಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳು ತಪ್ಪದೇ ತರಗತಿಗೆ ಹಾಜರಾಗಿ ತರಬೇತಿ ಪಡೆದುಕೊಂಡಲ್ಲಿ ಜಿಲ್ಲಾಡಳಿತದ ಕಾರ್ಯಕ್ಕೆ ಅರ್ಥ ಬರಲಿದೆ ಎಂದು ಸಹಾಯಕ ಆಯುಕ್ತರಾದ ಗಜಾನನ ಬಾಳೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X