ರಾಯಚೂರು ಜಿಲ್ಲಾ ಉತ್ಸವ: ಜನವರಿ 26ರಿಂದ ಹೆಲಿಕಾಪ್ಟರ್ ರೈಡ್

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 26ರಿಂದ 31ರವರೆಗೆ ರಾಯಚೂರು ಜಿಲ್ಲೆಯ ನಾಗರಿಕರಿಗೆ ಬಾನಂಗಳದಿಂದ ರಾಯಚೂರು ವೀಕ್ಷಣೆಗೆ ರಾಯಚೂರು ಬೈಸ್ಕಯ್ ಎಂಬ ವಿಶೇಷ ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಿಂದ ಹೆಲಿಕಾಪ್ಟರ್ ರೈಡ್‌ಗೆ ಅವಕಾಶ ಕಲ್ಪಿಸಲಾಗಿದೆ. ಈ ವಿಶೇಷ ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮ ಪ್ರತಿದಿನ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 12.30ರಿಂದ ಸಂಜೆ 4.30ರವರೆಗೆ ನಡೆಯಲಿದೆ. ಪ್ರತಿಯೊಬ್ಬರಿಗೆ ಕೇವಲ 3,500 ರೂ.ಗಳನ್ನು ನಿಗದಿ ಮಾಡಲಾಗಿದೆ. 2 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು. ಟಿಕೆಟ್ ಕುರಿತು ಮಾಹಿತಿಗಾಗಿ ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಉತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Next Story





