ರಾಯಚೂರು | ಬೆಳೆ ಹಾನಿ ಪ್ರದೇಶಗಳಿಗೆ ಅ.3ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಭೇಟಿ

ಡಾ.ಶರಣಪ್ರಕಾಶ್ ಪಾಟೀಲ್
ರಾಯಚೂರು : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಅ.3ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಲಿಂಗಸುಗೂರು, ಮಸ್ಕಿ, ಸಿಂಧನೂರು, ಮಾನ್ವಿ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





