Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು...

ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ : ಸಚಿವ ರಿಝ್ವಾನ್ ಅರ್ಷದ್

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ28 Nov 2026 8:23 PM IST
share
ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ : ಸಚಿವ ರಿಝ್ವಾನ್ ಅರ್ಷದ್

ರಾಯಚೂರು: ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದ್ದು, ಆಹಾರ ಧಾನ್ಯಗಳ ವಿತರಣೆಯಲ್ಲಿ ಇನ್ನಷ್ಟು ವೇಗ ಹೆಚ್ಚಿಸಿ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಆಹಾರ ತಲುಪಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವ ರಿಝ್ವಾನ್ ಅರ್ಷದ್ ಸೂಚಿಸಿದರು.

ನವೆಂಬರ್ 28ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಆಹಾರ ಧಾನ್ಯಗಳ ವಿತರಣೆಯಲ್ಲಿ ಶೇ.88.23ರಷ್ಟು ಪ್ರಗತಿ ಸಾಧಿಸಲಾಗಿದೆ. ನವೆಂಬರ್ 29 ಮತ್ತು 30ರೊಳಗೆ ಬಾಕಿ ಇರುವ ವಿತರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಉಳಿದ ದಿನಗಳಲ್ಲಿ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಿದರೆ ನಿಗದಿತ ಗುರಿ ತಲುಪಲು ಸಾಧ್ಯವಿದೆ. ಆಹಾರ ಧಾನ್ಯಗಳ ವಿತರಣೆಯಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹೊಸ ಪಡಿತರ ಚೀಟಿಗಳ ವಿಲೇವಾರಿ ಕುರಿತು ಮಾತನಾಡಿದ ಅವರು, ಮೇ 18ರ ನಂತರ ಸ್ವೀಕರಿಸಿದ ಅರ್ಜಿಗಳು ಸೇರಿದಂತೆ ಬಾಕಿ ಇರುವ ಎಲ್ಲ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಅನರ್ಹ ಅಥವಾ ಮೃತ ಫಲಾನುಭವಿಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು. ಕ್ಷೇತ್ರಮಟ್ಟದ ಪರಿಶೀಲನೆ ಮೂಲಕ ದತ್ತಾಂಶಗಳನ್ನು ನವೀಕರಿಸಬೇಕು. ಹಿರಿಯ ನಾಗರಿಕರ ನೋಂದಣಿ ಪ್ರಕ್ರಿಯೆಯನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು. 65 ವರ್ಷ ಮೇಲ್ಪಟ್ಟ ಕೆಲವು ಫಲಾನುಭವಿಗಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದ್ದು, ಅಂತಹ ಪ್ರಕರಣಗಳ ವಿವರಗಳನ್ನು ಪರಿಶೀಲಿಸಿ ದತ್ತಾಂಶ ನವೀಕರಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ಕಿ ಸಾಗಾಟ, ಕಳ್ಳಸಾಗಣೆ ಹಾಗೂ ಪಡಿತರ ಚೀಟಿಗಳ ದುರ್ಬಳಕೆ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು 270 ಪ್ರಕರಣಗಳನ್ನು ದಾಖಲಿಸಿ, 272 ಮಂದಿಯನ್ನು ಬಂಧಿಸಲಾಗಿದೆ. ಆದರೆ, ರಾಜ್ಯದ ಒಟ್ಟಾರೆ ಪರಿಸ್ಥಿತಿಗೆ ಹೋಲಿಸಿದರೆ ರಾಯಚೂರು ಜಿಲ್ಲೆಯ ಪ್ರಗತಿ ತೃಪ್ತಿಕರವಾಗಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ರಾಯಚೂರು ಗಡಿ ಜಿಲ್ಲೆಯಾಗಿರುವುದರಿಂದ ಇಲ್ಲಿ ಹೆಚ್ಚಿನ ಮಟ್ಟದಲ್ಲಿ ಕಾರ್ಯಾಚರಣೆ ನಡೆಯಬೇಕು. ಬೇರೆಡೆಗಳಲ್ಲಿ ಒಬ್ಬ ಸದಸ್ಯರ ಹೆಸರಿನಲ್ಲಿ ಕುಟುಂಬದ ಮೂವರು ಅಥವಾ ನಾಲ್ವರು ಸದಸ್ಯರನ್ನು ಸೇರಿಸಿ ಪಡಿತರ ಚೀಟಿಗಳನ್ನು ಸ್ಥಳಾಂತರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಅಕ್ರಮಗಳು ಕೆಳಹಂತದಲ್ಲಿ ಹೇಗೆ ನಡೆಯುತ್ತಿವೆ ಎಂಬುದನ್ನು ಪತ್ತೆಹಚ್ಚಬೇಕು ಎಂದು ಸಚಿವರು ಸೂಚಿಸಿದರು.

ಈ ವೇಳೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4,57,287 ಪಿಎಚ್‌ಎಚ್ ಪಡಿತರ ಚೀಟಿಗಳಿದ್ದು, ಅವುಗಳ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಎಎವೈ ಪಡಿತರ ಚೀಟಿಗಳಲ್ಲಿ 1,90,386 ಸದಸ್ಯರಿದ್ದಾರೆ. ಪಿಎಚ್‌ಎಚ್/ಬಿಪಿಎಲ್ ಪಡಿತರ ಚೀಟಿಗಳಲ್ಲಿ 14,92,394 ಫಲಾನುಭವಿಗಳಿದ್ದು, ಜಿಲ್ಲೆಯಲ್ಲಿ ಒಟ್ಟಾರೆ 16,82,780 ಫಲಾನುಭವಿಗಳು ಪಡಿತರ ಪಟ್ಟಿಯಲ್ಲಿ ನೋಂದಾಯಿತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 741 ನ್ಯಾಯಬೆಲೆ ಅಂಗಡಿಗಳಿವೆ. ಹೊಸದಾಗಿ ಮೂರು ತಾಲ್ಲೂಕುಗಳ ರಚನೆಯಾದ ನಂತರ, 2026ರ ಏಪ್ರಿಲ್‌ನಲ್ಲಿ ಅವುಗಳನ್ನು ಆಹಾರ ಇಲಾಖೆಯ ದತ್ತಾಂಶ ವ್ಯವಸ್ಥೆಗೆ ಸೇರಿಸಲಾಗಿದ್ದು, ಪ್ರಸ್ತುತ 741 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಇ-ಕೆವೈಸಿ ಪ್ರಗತಿ : ಜಿಲ್ಲೆಯ ಒಟ್ಟು 16,82,780 ಫಲಾನುಭವಿಗಳ ಪೈಕಿ ಈವರೆಗೆ 16,73,130 ಮಂದಿಯ ಇ-ಕೆವೈಸಿ ಪೂರ್ಣಗೊಂಡಿದೆ. ಇನ್ನೂ 9,650 ಮಂದಿಯ ಇ-ಕೆವೈಸಿ ಬಾಕಿ ಇದ್ದು, ಒಟ್ಟಾರೆ ಶೇ.99.43ರಷ್ಟು ಪ್ರಗತಿ ಸಾಧಿಸಲಾಗಿದೆ. ಐದು ವರ್ಷದೊಳಗಿನ ಮಕ್ಕಳ ಇ-ಕೆವೈಸಿಗೆ ಸಂಬಂಧಿಸಿದಂತೆ ಈ ಹಿಂದೆ ಮಾಡಲಾಗಿದ್ದ ಪ್ರಕ್ರಿಯೆಯನ್ನು ಮತ್ತೆ ನವೀಕರಿಸಬೇಕಿದೆ. ಸುಮಾರು 9.50 ಲಕ್ಷ ಮಕ್ಕಳ ಪೈಕಿ 7,89,003 ಮಕ್ಕಳ ಇ-ಕೆವೈಸಿ ನವೀಕರಣ ಪೂರ್ಣಗೊಂಡಿದ್ದು, 1,61,046 ಮಕ್ಕಳ ಪ್ರಕ್ರಿಯೆ ಬಾಕಿ ಇದೆ. ಈ ವಿಭಾಗದಲ್ಲಿ ಶೇ.83.05ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸುರಾಜು, ಮಾನ್ವಿ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ಆಹಾರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಹರೀಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Raichure-KYCRizwan Arshad
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X