Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನವಜಾತ ಶಿಶುಗಳಲ್ಲಿ ಜನ್ಮಜಾತ...

Raichur | ನವಜಾತ ಶಿಶುಗಳಲ್ಲಿ ಜನ್ಮಜಾತ ದೋಷಗಳ ಆರಂಭಿಕ ಪತ್ತೆ ಅತ್ಯಗತ್ಯ: ಡಾ. ಸುರೇಂದ್ರ ಬಾಬು

ವಾರ್ತಾಭಾರತಿವಾರ್ತಾಭಾರತಿ3 Jun 2026 8:02 PM IST
share
Raichur | ನವಜಾತ ಶಿಶುಗಳಲ್ಲಿ ಜನ್ಮಜಾತ ದೋಷಗಳ ಆರಂಭಿಕ ಪತ್ತೆ ಅತ್ಯಗತ್ಯ: ಡಾ. ಸುರೇಂದ್ರ ಬಾಬು

ರಾಯಚೂರು: ನವಜಾತ ಶಿಶುಗಳಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಮಗುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಸುರೇಂದ್ರ ಬಾಬು ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಪತ್ತೆ ಹಚ್ಚುವ ವಿಧಾನಗಳ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನವಜಾತ ಶಿಶುಗಳಲ್ಲಿ ಆರೋಗ್ಯದ ಜೈವಿಕ ಕ್ರಿಯೆ (ಚಯಾಪಚಯ) ಸಂಬಂಧಿತ ಕೆಲವು ಜನ್ಮಜಾತ ದೋಷಗಳನ್ನು ನಿರ್ಲಕ್ಷಿಸಿದರೆ ಮಗುವಿನ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸೇವೆಗಳ ಮೂಲಕ ಇಂತಹ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಹಾಗೂ ಗಣಿ ಪೀಡಿತ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಿ ಈ ಸೌಲಭ್ಯವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರಲ್ಲಿ ಇದರ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಂದಿತಾ ಎಂ.ಎನ್. ಮಾತನಾಡಿ, ಮಗು ಜನಿಸಿದ ತಕ್ಷಣ ನಡೆಸುವ ನವಜಾತ ಶಿಶು ತಪಾಸಣೆಯಿಂದ ಜನ್ಮಜಾತ ದೋಷಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಬಹುದು ಎಂದರು.

ವಿಶೇಷವಾಗಿ ಥೈರಾಯ್ಡ್ ಸಂಬಂಧಿತ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿದರೆ ಸೂಕ್ತ ಔಷಧಿ ಹಾಗೂ ಆಹಾರ ಪದ್ಧತಿಯ ಮೂಲಕ ಮಗುವಿನ ಸಾಮಾನ್ಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಪಾಲಕರು ತಮ್ಮ ಮಗುವಿನ ಆರೋಗ್ಯದ ಬಗ್ಗೆ ಯಾವುದೇ ಅನುಮಾನ ಕಂಡುಬಂದರೆ ತಕ್ಷಣ ಸರ್ಕಾರಿ ಆಸ್ಪತ್ರೆಗಳ ಮಕ್ಕಳ ತಜ್ಞರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್, ಯುಎನ್‌ಡಿಪಿ ರಾಕೇಶ್, ಡಿಪಿಸಿ ಹಾಗೂ ಸಿಪಿಓ ಬಸವರಾಜಪ್ಪಗೌಡ, ಎಮ್‌ಎನ್‌ಡಿ ಜಿಲ್ಲಾ ವ್ಯವಸ್ಥಾಪಕ ಗುರುಗುಪ್ಪಾ ಸೇರಿದಂತೆ ಜಿಲ್ಲೆಯ ವಿವಿಧ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞರು ತರಬೇತಿ ಕಾರ್ಯಾಗಾರದಲ್ಲಿ ಇದ್ದರು

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X