Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ನಾಗರಿಕ ರಕ್ಷಣಾ ಕಾರ್ಯಾಚರಣೆಯ...

ರಾಯಚೂರು | ನಾಗರಿಕ ರಕ್ಷಣಾ ಕಾರ್ಯಾಚರಣೆಯ ತುರ್ತು ಸಭೆ

ಸಭೆಯಲ್ಲಿ ಸಚಿವರು, ಸಂಸದರು, ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ7 May 2025 3:25 PM IST
share
Photo of Metting

ರಾಯಚೂರು : ತುರ್ತು ಪರಿಸ್ಥಿತಿಯ ಪ್ರತಿಕೂಲ ಸಂದರ್ಭದಲ್ಲಿ ನಾಗರಿಕರ ರಕ್ಷಣೆ, ಹಾನಿ ಕಡಿಮೆಗೊಳಿಸುವುದು, ಸಶಸ್ತ್ರ ಪಡೆಗಳ ಕಾರ್ಯದಕ್ಷತೆ ಬಲಗೊಳಿಸುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲೆಯಲ್ಲಿ ನಾಗರಿಕ ರಕ್ಷಣಾ ಸಿದ್ಧತೆ ಕಾರ್ಯಾಚರಣೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಮೇ 7ರಂದು ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾ ಭವನದಲ್ಲಿ ಸಚಿವರು, ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ತುರ್ತು ಸಭೆ ನಡೆಸಿದರು.

ನಾಗರಿಕ ರಕ್ಷಣೆ, ನಾಗರಿಕ ರಕ್ಷಣಾ ಯೋಜನೆ, ಸೇನಾ ದಾಳಿ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ನಾಗರಿಕ ರಕ್ಷಣಾ ಕಾಯಿದೆ-1968, ಭಾರತ ರಕ್ಷಣಾ ಕಾಯಿದೆ 1962, 1971, ಜಿನೀವಾ ಕನ್ವೆನ್ಶನ್ ಕಾಯಿದೆ-2010, ನಾಗರಿಕೆ ರಕ್ಷಣೆ ಮತ್ತು ತರಬೇತಿ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ತುರ್ತು ಪರಿಸ್ಥಿತಿಯ ಪ್ರತಿಕೂಲ ಸಂದರ್ಭದಲ್ಲಿ ಅಗ್ನಿಶಾಮಕ ಸೇವೆ, ರಕ್ಷಣಾ ಸೇವೆ, ತುರ್ತು ಸೇವೆ, ಕಲ್ಯಾಣ ಸೇವೆ, ಶವ ವಿಲೇವಾರಿ ಕ್ರಮಗಳು, ಸರ್ಕಾರಿ ಸಿಬ್ಬಂದಿ, ವಾರ್ಡನ್ ಮತ್ತು ಸ್ವಯಂ ಸೇವಕರನ್ನು ನೋಂದಾಯಿಸಿ ತರಬೇತಿ ನೀಡುವುದು, ಸಿವಿಲ್ ಡಿಫೆನ್ಸ್ ಕಂಟ್ರೋಲ್ ರೂಮ್‌ಗಳನ್ನು ಹಾಗೂ ಸಿವಿಲ್ ಡಿಫೆನ್ಸ್ ಸೈರನ್‌ಗಳನ್ನು ಕಾರ್ಯಗತಗೊಳಿಸುವುದು ಮತ್ತು ಅಗತ್ಯ ಉಪಕರಣಗಳು ಮತ್ತು ಸರಬರಾಜಿನೊಂದಿಗೆ ನಾಗರಿಕ ರಕ್ಷಣಾ ಮತ್ತು ಸ್ಥಳೀಯ ತುರ್ತು ಸೇವೆಗಳನ್ನು ಸಜ್ಜುಗೊಳಿಸುವುದು, ವಸತಿಗಾಗಿ ಸುರಕ್ಷಿತ ಕಟ್ಟಡ ಮತ್ತು ಸೇನಾರಹಿತ ವಲಯವನ್ನು ಗುರುತಿಸುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಮಾಕ್ ಡ್ರಿಲ್ ರೂಪುರೇಷಗಳ ಬಗ್ಗೆ ಸಹ ಸಭೆಯಲ್ಲಿ ಚರ್ಚೆ ನಡೆಯಿತು. ವಾಯುದಾಳಿಯ ಸಂದರ್ಭದಲ್ಲಿ ಸೈರನ್‌ಗಳ ಸಕ್ರಿಯಗೊಳಿಸುವಿಕೆ, ತೆಗೆದುಕೊಳ್ಳಬೇಕಾದ ಕ್ರಮಗಳು, ಯಾವುದೇ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ಪಾರಾಗುವ ಕ್ರಮಗಳು, ಹಾನಿಗೊಳಗಾದ ಕಟ್ಟಡದಿಂದ ಸ್ಥಳಾಂತರ ಕ್ರಮ, ತಾತ್ಕಾಲಿಕ ಆಸ್ಪತ್ರೆಯ ಸ್ಥಾಪನೆ, ಆಕ್ರಮಿತ ಪ್ರದೇಶದಿಂದ ನಾಗರಿಕನ್ನು ಸೇನಾರಹಿತ ವಲಯಗಳಿಗೆ ಸ್ಥಳಾಂತರಿಸುವುದು, ಕಂಟ್ರೋಲ್ ರೂಮ್ ಗೆ ವರದಿ ನೀಡುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಮಾಕ್ ಡ್ರಿಲ್ ಸಂದರ್ಭದಲ್ಲಿ ಸರಿಯಾಗಿ ಅಭ್ಯಾಸ ನಡೆಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಸಾರ್ವಜನಿಕರಲ್ಲಿ ಮನವಿ :

ಈ ವೇಳೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಮಾತನಾಡಿ, ತುರ್ತು ಪರಿಸ್ಥಿತಿಯ ಬಗ್ಗೆ ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಸಭೆಯ ಮೂಲಕ ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು. ಆಯಾ ವಿಧಾನಸಭಾ ಕ್ಷೇತ್ರಗಳ ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದು, ಈ ಬಗ್ಗೆ ವಿಶೇಷ ನಿಗಾವಹಿಸಬೇಕು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಎಂದು ತಿಳಿಸಿದರು.

ನಾಗರಿಕ ರಕ್ಷಣಾ ಕಾರ್ಯಚರಣೆಗೆ ಸಂಬಂಧಿಸಿದಂತೆ ಸರ್ವ ಪಕ್ಷಗಳ ಮತ್ತು ಎಲ್ಲ ಸಂಘಟನೆಗಳ ಸಭೆ ಕರೆದು ಚರ್ಚಿಸಲು ಕ್ರಮ ವಹಿಸಬೇಕು ಎಂದು ಸಚಿವರು ಎಲ್ಲ ತಹಶೀಲ್ದಾರಗಳಿಗೆ ಸೂಚನೆ ನೀಡಿದರು.

ರಾಯಚೂರಿನ ವೈಟಿಪಿಎಸ್, ಆರ್‌ಟಿಪಿಎಸ್‌ಗಳು, ರಸಾಯನಿಕ ಪ್ಯಾಕ್ಟರಿಗಳನ್ನು ಗುರಿಯಾಗಿಸುವ ತಂತ್ರಗಾರಿಕೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ವಿಶೇಷವಾಗಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ತಾವಿರುವ ಸ್ಥಳದಲ್ಲಿ ಜಾಗೃತರಾಗಿರಬೇಕು. ಅವಶ್ಯಕ ಸಂದರ್ಭದಲ್ಲಿ ಸಹಾಯವಾಗಲು ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ ವಹಿಸಬೇಕು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸುಸಜ್ಜಿತ ವೈದ್ಯಕೀಯ ಸೇವೆ ಇರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯವಾಗಿ ವಿವಿಧ ಭದ್ರಾತಾ ಪಡೆಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ತರಬೇತಿಯೊಂದಿಗೆ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಬೇಕು. ಆರೋಗ್ಯ, ಅಗ್ನಿಶಾಮಕ ಮತ್ತು ಇನ್ನೀತರ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಡೆಸಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡಲ್ಲಿ ಯಾವುದೇ ಬಗೆಯ ತುರ್ತು ಪರಿಸ್ಥಿತಿಯ ಪ್ರತಿಕೂಲ ಸಂದರ್ಭವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಸಚಿವರಾದ ಎನ್.ಎಸ್.ಬೋಸರಾಜು ಅವರು ಮತ್ತು ಸಂಸದರಾದ ಜಿ.ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಸಲಹೆ ಮಾಡಿದರು.

ಮಾಕ್‌ಡ್ರಿಲ್ ಮತ್ತು ಇನ್ನೀತರ ವಿಷಯಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್, ಬಸವರಾಜ ತುರವಿಹಾಳ, ಹಂಪನಗೌಡ ಬಾದರ್ಲಿ, ಎ ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಗಜಾನನ ಬಾಲೆ ಮತ್ತು ಇನ್ನೀತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X