ರಾಯಚೂರು | ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ : ಜಿಲ್ಲಾಧಿಕಾರಿ ನಿತೀಶ್ ಕೆ.

ನಿತೀಶ್ ಕೆ.
ರಾಯಚೂರು : ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ರೈತರಿಂದ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್ ನಿಂದ ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ಗೆ 7,280 ರೂ.ಗಳಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುತ್ತಿದ್ದು, ಮೇ 16ರಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ.
ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಂಧ ರಾಯಚೂರು ತಾಲೂಕಿನ ಹುಣಸಿಹಾಳಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ಷಣ್ಮುಖ.ಜಿ ಮೊಬೈಲ್ ಸಂಖ್ಯೆ: 9743695467, ದೇವದುರ್ಗ ತಾಲೂಕಿನ ಜಾಲಹಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ನರಸಿಂಗ ನಾಯಕ ಮೊಬೈಲ್ ಸಂಖ್ಯೆ: 7899312989, ಲಿಂಗಸುಗೂರು ತಾಲೂಕಿನ ಮಟ್ಟೂರು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ವೀರೇಶ ದೇಸಾಯಿ ಮೊಬೈಲ್ ಸಂಖ್ಯೆ: 9113649836, ಸಿಂಧನೂರು ತಾಲೂಕಿನ ಜವಳಗೇರಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ದೇವರಾಜ ಮೊಬೈಲ್ ಸಂಖ್ಯೆ: 9964165509, ಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ಚನ್ನನಗೌಡ ಮೊಬೈಲ್ ಸಂಖ್ಯೆ: 9964315868, ಮಾನವಿ ತಾಲೂಕಿನ ತೋರಣದಿನ್ನಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ಬಸಯ್ಯ .ಟಿ ಮೊಬೈಲ್ ಸಂಖ್ಯೆ: 9902387316, ಸಿರವಾರದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಕಾರ್ಯದರ್ಶಿ ನಿಂಬಯ್ಯ ಸ್ವಾಮಿ ಮೊಬೈಲ್ ಸಂಖ್ಯೆ: 9880891919ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡಿಸಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.