Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜಿಲ್ಲೆಯ ಪ್ರೌಢಶಾಲೆಗಳಲ್ಲಿ...

ರಾಯಚೂರು | ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ನಡೆಸಲು ಅವಧಿ ವಿಸ್ತರಣೆ: ಕೆ.ಡಿ.ಬಡಿಗೇರ

ವಾರ್ತಾಭಾರತಿವಾರ್ತಾಭಾರತಿ7 Sept 2025 9:19 PM IST
share

ರಾಯಚೂರು : ಅಕ್ಟೋಬರ್ 2ರಂದು ನಡೆಯುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ರಾಯಚೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ರಾಯಚೂರು ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ದೇವದುರ್ಗ, ಲಿಂಗಸಗೂರ, ಮಾನವಿ, ರಾಯಚೂರು ಮತ್ತು ಸಿಂಧನೂರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಸಂಬಂಧ ಈಗಾಗಾಲೇ ಪತ್ರ ಬರೆದು ತಮ್ಮ ತಮ್ಮ ವ್ಯಾಪ್ತಿಯ ಎಲ್ಲ ಪ್ರೌಢಶಾಲೆಗಳಲ್ಲಿ ಈ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡುವಂತೆ ತಿಳಿಸಲಾಗಿದೆ.

ಸೆ.10ರವರೆಗೆ ಈ ಪ್ರಬಂಧ ಸ್ಪರ್ಧೆಯನ್ನು ನಡೆಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಆದ್ದರಿಂದ ಇದುವರೆಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸದೇ ಇರುವ ಆಯಾ ಶಾಲೆಗಳ ಮುಖ್ಯ ಗುರಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ತಮ್ಮ ತಮ್ಮ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಪ್ರಬಂಧ ಸ್ಪರ್ಧೆಯ ಮಾಹಿತಿ ನೀಡಿ ಸೆ.10ರೊಳಗೆ ಸ್ಪರ್ಧೆಗೆ ಆಯೋಜನೆ ಮಾಡಬೇಕು. ಆಸಕ್ತ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ನಡೆಯುವ ಈ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು. ವಿದ್ಯಾರ್ಥಿಗಳು ಬರೆದ ಎಲ್ಲ ಪ್ರಬಂಧಗಳನ್ನು ಆಯಾ ಶಾಲೆಯ ಮುಖ್ಯ ಗುರುಗಳು, ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ ಅವರು ತಿಳಿಸಿದ್ದಾರೆ.

1. ಸ್ವಚ್ಚತೆಯ ಪಾಠ-ಗಾಂಧೀಜಿಯವರ ಸಂದೇಶ

2.ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ

3.ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು- ನನ್ನ ಕಲ್ಪನೆ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು.

ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕಾರವಾಗಿ ಬಳಸಿದ ಪರಾಮರ್ಶನ/ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ/ ಆಧಾರಗ್ರಂಥಗಳು/ಮೊಬೈಲ್‌ಗಳ ಬಳಕೆಗೆ ಅವಕಾಶ ವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅ.2ರ ಮಹಾತ್ಮಗಾಂಧೀಜಿ ಜಯಂತಿ ಸಮಾರಂಭದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ 3,000 ರೂ, ದ್ವಿತೀಯ 2,000 ರೂ. ಮತ್ತು ತೃತೀಯ 1000 ರೂ. ನೀಡಲಾಗುತ್ತದೆ. ರಾಜ್ಯಮಟ್ಟದಲ್ಲಿ ಪ್ರಥಮ 31,000 ರೂ, ದ್ವಿತೀಯ 21,000 ರೂ. ಮತ್ತು ತೃತೀಯ 11,000 ರೂ. ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಹೊಸಮನಿ ಮೊ.9008462236 ಅಥವಾ ಪ್ರಥಮ ದರ್ಜೆ ಸಹಾಯಕರಾದ ಲಿಂಗರಾಜ್ ಮೊ:9743892080 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X