ರಾಯಚೂರು : ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ರಾಯಚೂರು: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನೂ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ರಾಯಚೂರು ನಗರದ ಜಲಾಲನಗರದಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ.
ಪತಿ ವಿಷ್ಣುರೆಡ್ಡಿ (45) ಪತ್ನಿ ಅರುಣಾ (36), ಮಗ ಶ್ಲೋಕ (10), ಮಗಳು ಖುಷಿ (7) ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನೂ ರಾಯಚೂರು ತಾಲೂಕಿನ ಚಿಕ್ಕಸುಗೂರು ಬಳಿಯ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ಮೃತದೇಹಗಳು ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದು, ಶವ ಪರೀಕ್ಷೆಯ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶುಗಿರಿ ತಿಳಿಸಿದರು.
ಘಟನೆ ಬಳಿಕ ಡಿವೈಎಸ್ ಪಿ ಶಾಂತವೀರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು.
ನಗರದ ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Next Story




