ರಾಯಚೂರು | ನಿರ್ಗಮಿತ ಸಿಇಓಗೆ ಬೀಳ್ಕೊಡುಗೆ, ನೂತನ ಸಿಇಓಗೆ ಸ್ವಾಗತ ಕಾರ್ಯಕ್ರಮ

ರಾಯಚೂರು : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಈಗ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ವರ್ಗಾವಣೆಯಾದ ರಾಹುಲ್ ತುಕಾರಾಂ ಪಾಂಡ್ವೆ ಅವರಿಗೆ ಬೀಳ್ಕೊಡುಗೆ ಹಾಗೂ ರಾಯಚೂರು ಜಿ.ಪಂಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ನಿಯುಕ್ತಿಗೊಂಡ ಈಶ್ವರ ಕುಮಾರ ಕಾಂದೂ ಅವರಿಗೆ ಸ್ವಾಗತ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಈ ವೇಳೆ ನಿರ್ಗಮಿತ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಅವರು ಮಾತನಾಡಿ, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ನೂತನ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ, ಸಹಾಯಕ ಆಯುಕ್ತ ಗಜಾನನ ಬಾಲೆ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕ ಶರಣಬಸವರಾಜ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.





