ರಾಯಚೂರು | ಹಾವು ಕಡಿದು ರೈತ ಮೃತ್ಯು

ಗಂಗಪ್ಪ ಮ್ಯಾತ್ರಿ
ರಾಯಚೂರು: ಹಾವು ಕಡಿತದಿಂದ ರೈತ ಮೃತಪಟ್ಟಿರುವ ಘಟನೆ ರಾಯಚೂರು ತಾಲ್ಲೂಕು ರಘುನಾಥನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಗಂಗಪ್ಪ ಮ್ಯಾತ್ರಿ (38) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಡಿದಿದ್ದು, ಕುಟುಂಬದವರು ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.
ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





