ರಾಯಚೂರು | ಹಾವು ಕಡಿದು ರೈತ ಮೃತ್ಯು

ಮೌನೇಶ
ರಾಯಚೂರು : ಹಾವು ಕಡಿತದಿಂದ ರೈತನೊರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ತಿಂಪೂರು ದೊಡ್ಡಿಯಲ್ಲಿ ನಡೆದಿದೆ.
ಮೃತರನ್ನು ರೈತ ಮೌನೇಶ(45) ಎಂದು ಗುರುತಿಸಲಾಗಿದೆ.
ಮೌನೇಶ ಅವರು ತೋಟದಲ್ಲಿ ಕೆಲಸ ಮಾಡುವ ಸಮಯದಲ್ಲಿ ಹಾವು ಕಚ್ಚಿದ್ದು, ಅವರನ್ನು ಜಾಲಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೌನೇಶ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Next Story





