ರಾಯಚೂರು | ಮುದಗಲ್ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಎತ್ತರ ಹೆಚ್ಚಿಸಲು ರೈತರಿಂದ ಆಗ್ರಹ

ರಾಯಚೂರು: ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಮೇಗಳಪೇಟೆ ಮಾರ್ಗದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆಯ ಎತ್ತರವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಮುದಗಲ್ ಪಟ್ಟಣದ ಹೊರವಲಯದಲ್ಲಿ ಸರ್ವೇ ನಂ.18ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನಿರ್ಮಾಣವಾಗುತ್ತಿರುವ ಸೇತುವೆ ಕೇವಲ 10 ಫೀಟ್ ಎತ್ತರದಲ್ಲಿದೆ. ಇದರಿಂದ ರೈತರಿಗೆ ಹೊಲಗಳಿಗೆ ತೆರಳುವುದು, ಹೊಟ್ಟು ಹಾಗೂ ದವಸಧಾನ್ಯಗಳನ್ನು ಸಾಗಿಸುವುದು ಕಷ್ಟಕರವಾಗಲಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಭವಿಷ್ಯದಲ್ಲಿ ರೈತರ ಉತ್ಪನ್ನಗಳ ಸಾಗಾಟಕ್ಕೂ ತೀವ್ರ ಅಡಚಣೆ ಉಂಟಾಗುವ ಸಾಧ್ಯತೆ ಇದ್ದು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸೇತುವೆಯನ್ನು ಕನಿಷ್ಠ 20 ಫೀಟ್ ಎತ್ತರದಲ್ಲಿ ನಿರ್ಮಿಸಬೇಕೆಂದು ಆಗ್ರಹಿಸಿದರು.
Next Story





