Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಉತ್ಸವಕ್ಕೆ ಚುರುಕಿನ ಸಿದ್ಧತೆ :...

ರಾಯಚೂರು ಉತ್ಸವಕ್ಕೆ ಚುರುಕಿನ ಸಿದ್ಧತೆ : ವ್ಯಾಪಕ ಪ್ರಚಾರಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Jan 2026 10:57 PM IST
share
ರಾಯಚೂರು ಉತ್ಸವಕ್ಕೆ ಚುರುಕಿನ ಸಿದ್ಧತೆ : ವ್ಯಾಪಕ ಪ್ರಚಾರಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ

ರಾಯಚೂರು : ಫೆ.5ರಿಂದ ಮೂರು ದಿನಗಳ ಕಾಲ ನಡೆಯಲಿರುವ ಎಡೆದೊರೆ ನಾಡು–ರಾಯಚೂರು ಜಿಲ್ಲಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸೂಚನೆ ನೀಡಿದರು.

ನಗರದ ಹಳೆಯ ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಮಹಾನಗರ ಪಾಲಿಕೆಯ ಕೋರ್ಟ್ ಹಾಲ್‌ನಲ್ಲಿ ಸೋಮವಾರ ನಡೆದ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಮಂದಿರ, ಮಸೀದಿ, ಚರ್ಚ್‌ಗಳು ಸೇರಿದಂತೆ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಉತ್ಸವದ ಮಾಹಿತಿ ನೀಡಬೇಕು. ರಾಯಚೂರು, ಮಾನವಿ, ಸಿಂಧನೂರು, ಲಿಂಗಸುಗೂರು, ದೇವದುರ್ಗ, ಮಸ್ಕಿ, ಸಿರವಾರ ಸೇರಿದಂತೆ ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕಸ ಎತ್ತುವ ವಾಹನಗಳ ಮೂಲಕ ಜಿಂಗಲ್ ಪ್ರಸಾರ ಕಡ್ಡಾಯ ಮಾಡಬೇಕು ಎಂದು ಸೂಚಿಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪಿಡಿಒಗಳ ಸಭೆ ಕರೆದು, ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲಿ ಡಂಗೂರ, ಕಸ ವಾಹನ ಮತ್ತು ಜಾಥೆಗಳ ಮೂಲಕ ಉತ್ಸವದ ಪ್ರಚಾರ ನಡೆಸಬೇಕು. ಶಾಲಾ ಮುಖ್ಯಶಿಕ್ಷಕರ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಗಳು ಮತ್ತು ಶಾಲೆಗಳ ಮೂಲಕ ಜನಜಾಗೃತಿ ಜಾಥೆಗಳನ್ನು ಆಯೋಜಿಸಿ, ಫೆ.5, 6 ಮತ್ತು 7ರಂದು ಉತ್ಸವ ನಡೆಯಲಿದೆ ಎಂಬ ಸಂದೇಶವನ್ನು ಮನೆಮನೆ ತಲುಪಿಸಬೇಕು ಎಂದು ಸೂಚನೆ ನೀಡಿದರು.

ಆಶಾ–ಅಂಗನವಾಡಿ ಮೂಲಕ ಮನೆಮನೆ ಪ್ರಚಾರ :

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಗ್ರಾಮದಲ್ಲಿ ಮನೆಮನೆಗೆ ತೆರಳಿ ಉತ್ಸವದ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ಅಥವಾ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರಚಾರ ಕಾರ್ಯದ ಮೇಲ್ವಿಚಾರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಆಟೋ, ಬಸ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಚಾರ :

ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಹಾಗೂ ಹೋಬಳಿಗಳಲ್ಲಿ ಆಟೋ ಮೂಲಕ ತಕ್ಷಣ ಪ್ರಚಾರ ಆರಂಭಿಸಬೇಕು. ನಗರ ಹಾಗೂ ಹೊರ ಜಿಲ್ಲೆಗಳಿಗೆ ಸಂಚರಿಸುವ ಎಲ್ಲ ಬಸ್‌ಗಳಿಗೆ ಪೋಸ್ಟರ್ ಅಂಟಿಸಿ ಪ್ರಚಾರ ನಡೆಸಬೇಕು. ನಗರದ ರೈಲ್ವೆ ನಿಲ್ದಾಣ ಸೇರಿದಂತೆ ಜನಸಂಚಾರ ಹೆಚ್ಚಿರುವ ಸ್ಥಳಗಳಲ್ಲಿ ಬ್ಯಾನರ್ ಅಳವಡಿಸಿ, ಉತ್ಸವದ ದಿನವಾರು ಹಾಗೂ ಸಮಯವಾರು ಕಾರ್ಯಕ್ರಮಗಳ ವಿವರ ನೀಡಬೇಕು ಎಂದು ಸೂಚಿಸಿದರು.

ಶಾಲಾ–ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಚಾರ :

ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉತ್ಸವದ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಡಿಡಿಪಿಐ ಹಾಗೂ ಡಿಡಿಪಿಯು ಅಧಿಕಾರಿಗಳು ಸುತ್ತೋಲೆ ಹೊರಡಿಸಿ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಉತ್ಸವಕ್ಕಾಗಿ ಸಿದ್ಧಪಡಿಸಿರುವ ವೆಬ್‌ಸೈಟ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಎನ್‌ಐಸಿ ಪೇಜ್‌ಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಪ್ರತಿ ದಿನ ನವೀಕರಿಸಿ ಜನತೆಗೆ ನಿಖರ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೋಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ ಬಿರಾದಾರ, ಪಾಲಿಕೆ ಉಪ ಆಯುಕ್ತೆ ಸಂತೋಷ ರಾಣಿ ಸೇರಿದಂತೆ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Tags

Raichur Festival
share
ವಾರ್ತಾಭಾರತಿ
ವಾರ್ತಾಭಾರತಿ
Next Story
X