Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಉತ್ಸವ ಸಿದ್ಧತೆ;...

ರಾಯಚೂರು ಉತ್ಸವ ಸಿದ್ಧತೆ; ಜನಪ್ರತಿನಿಧಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ4 Jan 2026 1:09 PM IST
share
ರಾಯಚೂರು ಉತ್ಸವ ಸಿದ್ಧತೆ; ಜನಪ್ರತಿನಿಧಿಗಳ ಸಭೆ
ಉತ್ಸವದ ವೇದಿಕೆ, ಕಾರ್ಯಕ್ರಮಗಳ ಸ್ವರೂಪದ ಪ್ಲಾನ್ ವೀಕ್ಷಿಸಿದ ಸಚಿವರು, ಶಾಸಕರು

ರಾಯಚೂರು: ಜ. 29, 30 ಹಾಗೂ 31ರಂದು ನಿಗದಿಯಾದ ರಾಯಚೂರು ಉತ್ಸವ-2026ರ ವೇದಿಕೆಯ ಹಾಗೂ ನಾನಾ ಕಾರ್ಯಕ್ರಮಗಳ ಸಮಗ್ರ ಸ್ವರೂಪದ ಪ್ರಾತ್ಯಕ್ಷಿಕೆಯನ್ನು ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಎನ್ ಎಸ್ ಬೋಸರಾಜು, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಡಾ.ಎಸ್.ಶಿವರಾಜ ಪಾಟೀಲ, ಬಸನಗೌಡ ತುರವಿಹಾಳ, ಹಂಪಯ್ಯ ನಾಯಕ, ಎ ವಸಂತಕುಮಾರ ಹಾಗೂ ಇನ್ನಿತರರು ವೀಕ್ಷಣೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜ. 4ರಂದು ನಡೆದ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಸಚಿವರು ಹಾಗೂ ಶಾಸಕರು ಮಾತನಾಡಿ, ಉತ್ಸವಕ್ಕೆ ಸಂಬಂಧಿಸಿದಂತೆ ಸಲಹೆ‌ ಸೂಚನೆಗಳನ್ನು ನೀಡಿದರು.

ಎಲ್ಲ ಸಮಿತಿಗಳ ಮೇಲೆ ಮೇಲ್ವಿಚಾರಣಾ ಸಮಿತಿಯೊಂದನ್ನು ರಚಿಸಿ ಪ್ರತಿ ನಿತ್ಯ ಎಲ್ಲ ತಯಾರಿಯ ಮೇಲ್ವಿಚಾರಣೆ ಆಗಬೇಕು. ಕೂಡಲೇ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ, ಅಂಗಡಿಕಾರರ ಸಭೆ ನಡೆಸಿ ಅವರ ಸಲಹೆ ಪಡೆಯಬೇಕು. ಆಯಾ ತಹಸೀಲ್ದಾರರು ಹಾಗೂ ತಾಪಂ ಇಒಗಳು ಆಯಾ ತಾಲೂಕಿನಲ್ಲಿ ಸಭೆ ನಡೆಸಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವಾಗಿ ಕೆಲಸ ಮಾಡಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆ ನಡೆಸಬೇಕು. ಜಿಲ್ಲೆಯ ಎಲ್ಲ ಸಾಹಿತಿಗಳು, ಕಲಾವಿದರು, ಕವಿಗಳು, ವಕೀಲರು, ಮಹಿಳಾ ಸಂಘಗಳು, ಆಟೋ ಹಾಗೂ ವಿವಿಧ ವಾಹನ ಚಾಲಕರು, ಯುವ ಸಂಘಟನೆಗಳು ಮತ್ತು ನಾಗರಿಕ ಸಮಿತಿಗಳು ಸೇರಿದಂತೆ ಬೇರೆಲ್ಲ ಜನ ಸಮುದಾಯಗಳ ಸಭೆಗಳು ಆಗಬೇಕು. ಎಲ್ಲ ಶಾಲೆಗಳ ಶಿಕ್ಷಕರ ಹಾಗೂ ಕಾಲೇಜು ಉಪನ್ಯಾಸಕರ ಸಭೆಗಳು ಆಗಬೇಕು ಎಂದು ಸಚಿವರು ಶಾಸಕರು ಸಲಹೆ ಮಾಡಿದರು.

ವಾಲ್ಮೀಕಿ ವಿಶ್ವವಿದ್ಯಾಲಯ ಸೇರಿದಂತೆ ಮಹತ್ವದ ಬೇರೆ ಬೇರೆ ವಿದ್ಯಾ ಸಂಸ್ಥೆಗಳಲ್ಲಿ ಸಹ ಬೇರೆ ಬೇರೆ ಕಾರ್ಯಕ್ರಮಗಳ ಆಯೋಜನೆ ಮಾಡಲು ಸಲಹೆ ಮಾಡಿದರು.

ಉತ್ಸವದ ಲೋಗೋ ವೀಕ್ಷಣೆ:

ಸಭೆಯಲ್ಲಿ ಮೊದಲಿಗೆ ರಾಯಚೂರು ಉತ್ಸವದ ಲೋಗೊ ವೀಕ್ಷಣೆ ನಡೆಯಿತು. ಮುಖ್ಯ ಕಾರ್ಯಕ್ರಮದ ವೇದಿಕೆ ಹಾಗೂ ಹೆಸರಾಂತ ಕಲಾವಿದರು ಭಾಗಿಯಾಗುವ ಬೃಹತ್ ವೇದಿಕೆಗಳ ಪ್ರಾತ್ಯಕ್ಷಿಕೆಯ ವೀಕ್ಷಣೆಯ ನಡೆಯಿತು.

ಈ ವೇಳೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಹತ್ತಾರು ವರ್ಷಗಳ ನಂತರ ಉತ್ಸವ ನಡೆಯುತ್ತಿದೆ. ಹಾಗಾಗಿ ಎಲ್ಲರನ್ನು ಒಳಗೊಂಡು ಉತ್ಸವ ನಡೆಯಬೇಕು. ಅಧಿಕಾರಿಗಳು ಉತ್ಸವದ ಕಾರ್ಯಗಳನ್ನು ಹಗರುವಾಗಿ ತೆಗೆದುಕೊಳ್ಳಬಾರದು. ಇದು ರಾಯಚೂರು ಸಿಟಿ ಉತ್ಸವ ಅಲ್ಲ; ಜಿಲ್ಲಾ ಉತ್ಸವವಾಗಿದೆ. ಹಾಗಾಗಿ ಎಲ್ಲರೂ ಪಕ್ಷಬೇಧ ಮರೆತು ಒಗ್ಗೂಡಿ ಉತ್ಸವ ಮಾಡೋಣ ಎಂದು ಸಲಹೆ ಮಾಡಿದರು.

ಉತ್ಸವ ಬೇರೆ ಬೇರೆ ರೀತಿ ನಡೆಯುತ್ತದೆ. ಕ್ರೀಡಾ ಚಟುವಟಿಕೆ ಈಗ ಆರಂಭವಾಗಿವೆ. ರಾಜ್ಯಮಟ್ಟದ ವಾಲಿಬಾಲ್, ಕಬ್ಬಡ್ಡಿ ಪಂದ್ಯ ನಡೆಯಲಿವೆ. ಸೈಕ್ಲಿಂಗ್ ಮ್ಯಾರಾಥಾನ್, ಸೈಕ್ಲಿಂಗ್ ಓಟ, ಕುಸ್ತಿ ಪಂದ್ಯ, ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಗಳು ನಡೆಯಲಿವೆ. ಜನವರಿ 29ರಂದು ಬೆಳಗ್ಗೆ ಮೆರವಣಿಗೆ, ಸಂಜೆ 5ರಿಂದ ಉತ್ಸವದ ಉದ್ಗಾಟನೆ ನಡೆಯಲಿದೆ. ಜಿಲ್ಲಾ ರಂಗಮಂದಿರ, ಕೃಷಿ ವಿವಿ ಆವರಣದಲ್ಲಿನ ಕಾನ್ಫರೆನ್ಸ್ ಹಾಲ್ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವ್ಯವಸ್ಥೆ ಮಾಡಲಾಗಿದೆ. ಜ. 30ರಂದು ಬೆಳಗ್ಗೆ ಉದ್ಯೋಗ ಮೇಳ ನಡೆಯಲಿದೆ. ಫಲಪುಷ್ಪ ಮೇಳವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುತ್ತಿದೆ. ಮತ್ಸ್ಯ ಮೇಳ, ಡಾಗ್ ಶೋ, ಶಾಲಾ ಮಕ್ಕಳಿಗಾಗಿ ಪ್ರಬಂಧ, ಸಾಹಿತಿಗಳಿಂದ ಕವಿಗೋಷ್ಟಿ, ಮಹಿಳಾ ಗೋಷ್ಠಿ, ಮಾಧ್ಯಮ ಗೋಷ್ಠಿ ನಡೆಸಲಾಗುತ್ತದೆ.

ಆಹಾರ ಮೇಳ ನಡೆಸಿ100 ಸ್ಟಾಲ್‌ಗಳ ಅಳವಡಿಕೆಗೆ ಯೋಜನೆ ಮಾಡಿದ್ದೇವೆ. ಜ. 31ರಂದು ಗ್ಯಾರಂಟಿ ಮೇಳದ ಜೊತೆಗೆ ಬೆಳಿಗ್ಗೆ 10 ದಿಂದ 2 ಗಂಟೆವರೆಗೆ ಕೃಷಿ ಮೇಳ ನಡೆಸಲು ಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಭೆಗೆ ವಿವರಿಸಿದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಪವನ್ ಕಿಶೋರ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಪಾಲಿಕೆಯ ಸಮಿತಿ ಕಾರ್ಯದರ್ಶಿ ಕೃಷ್ಣ ಶಾವಂತಗೇರಿ, ತಹಶೀಲ್ದಾರ್ ಸುರೇಶ ವರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ಧರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X