Raichur | ಪ್ಲಾಸ್ಟಿಕ್ ತ್ಯಾಜ್ಯ ಅಂಗಡಿಗೆ ಬೆಂಕಿ : ಅಪಾರ ನಷ್ಟ

ರಾಯಚೂರು : ನಗರದ ಪೇಟ್ಲಾ ಬುರ್ಜ್ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಹಳೆಯ ಬಂಡಲ್ ವೈಯರ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿಯಲ್ಲಿ ಅಪಾರ ನಷ್ಟ ಸಂಭವಿಸಿದೆ.
ಮಝಾರ್ ಅವರಿಗೆ ಸೇರಿದ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಹಳೆಯ ಬಂಡಲ್ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರು ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಸುಮಾರು 20 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಹಳೆಯ ಬಂಡಲ್‌ಗಳು ಬೆಂಕಿಗೆ ಆಹುತಿಯಾಗಿವೆ.
ಈ ಘಟನೆ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Next Story




