ರಾಯಚೂರು | ಕಾರ್ಮಿಕ ಇಲಾಖೆಯಿಂದ ಆಹಾರಧಾನ್ಯ ಕಿಟ್ ವಿತರಣೆ

ರಾಯಚೂರು : ಕಾರ್ಮಿಕ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಬಾಲಕಾರ್ಮಿಕತೆಯಿಂದ ಬಿಡುಗಡೆಗೊಳಿಸಿ ಪುನರ್ವಸತಿ ಕಲ್ಪಿಸಲಾದ ಎಸ್.ಸಿ/ಎಸ್.ಟಿ ಮಕ್ಕಳಿಗೆ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಉಪಯೋಜನೆಯಡಿ ಶೈಕ್ಷಣಿಕ ಮತ್ತು ಆಹಾರಧಾನ್ಯ ಕಿಟ್‌ಗಳನ್ನು ಬುಧವಾರ ವಿತರಿಸಲಾಯಿತು.
ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು ಮಾತನಾಡಿ, ಮಕ್ಕಳಿಗೆ ಕಿಟ್‌ಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪ್ರತಿನಿತ್ಯ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ ಎಂದು ಪಾಲಕರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರಿನ 1ನೇ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಹ್ಮದ್ ಉಮರ್ ಅಬ್ದುಲ್, ರಾಯಚೂರಿನ 2ನೇ ವೃತ್ತದ ಕಾರ್ಮಿಕ ನಿರೀಕ್ಷಕರಾದ ಕು.ಪ್ರಿಯಾಂಕ ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಇದ್ದರು.
Next Story





