Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಯಚೂರು | ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣೇಶ ಚತುರ್ಥಿಯ ಶಾಂತಿಪಾಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ16 Aug 2025 5:59 PM IST
share
ರಾಯಚೂರು | ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣೇಶ ಚತುರ್ಥಿಯ ಶಾಂತಿಪಾಲನಾ ಸಭೆ
ಗೌರಿ ಗಣೇಶ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ ಮನವಿ

ರಾಯಚೂರು: ಆ.27ರಂದು ಜಿಲ್ಲೆಯಲ್ಲಿ ಶ್ರೀಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ.ಅವರು ಹೇಳಿದರು.

ಆ.16ರ ಶನಿವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಹಬ್ಬದಲ್ಲಿ ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಪರಿಸರ ಸ್ನೇಹಿ ವಿಗ್ರಹಗಳನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಮಣ್ಣಿನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಪ್ರತಿಮೆಯನ್ನು ಸಾರ್ವಜನಿಕ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಭಾವೈಕ್ಯತೆಯಿಂದ ಹಬ್ಬ ಆಚರಿಸಿ:

ರಾಯಚೂರಿನ ಎಲ್ಲ ಸಮಾಜ ಭಾಂದವರು ಭಾವೈಕ್ಯತೆಯಿಂದ ಎಲ್ಲರೂ ಒಡಗೂಡಿ ಹಬ್ಬ ಆಚರಿಸಬೇಕು. ಧ್ವನಿವರ್ಧಕಗಳಿಂದ ಯಾರಿಗೂ ಸಹ ತೊಂದರೆಯಾಗಬಾರದು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಶ್ರೀಗಣೇಶ ಮಂಡಳಿಗಳು ಮಾರ್ಗಸೂಚಿ ಪಾಲನೆಯ ಬಗ್ಗೆ ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ವಿವಿಧ ಸಮಾಜದ ಮುಖಂಡರಲ್ಲಿ ಕೋರಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಎಲ್ಲರೂ ತಪ್ಪದೇ ಪೂರ್ವ ಪರವಾನಿಗೆಯನ್ನು ಸಂಬಂಧಿಸಿದ ಇಲಾಖೆಯವರಿಂದ ಪಡೆಯಬೇಕು. ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುತ್ತವೆ. ರಾತ್ರಿ 10.30ರೊಳಗಾಗಿ ವಿಗ್ರಹಗಳನ್ನು ವಿಸರ್ಜನೆ ಮಾಡುವಂತೆ ಸಮಯ ನಿಗದಿಗೊಳಿಸಲಾಗಿದೆ. ಅದರಂತೆ ನಿಯಮಾನುಸಾರ ವಿಸರ್ಜನೆ ಮಾಡಬೇಕು. ಶಬ್ದ ಮಾಲಿನ್ಯ ಮಾಡುವ ಬೃಹತ್ ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದ್ದು, ಮಾರ್ಗಸೂಚಿಯನ್ವಯ ಧ್ವನಿವರ್ಧಕ ಬಳಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪಾತ್ರ ಮಾತನಾಡಿ, ಪರಿಸರ ರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಸರ ಹಾನಿಯಾಗದಂತೆ ಗಣೇಶೋತ್ಸವ ಆಚರಣೆ ಮಾಡಬೇಕು. ಪಿಓಪಿ ವಿಗ್ರಹಗಳನ್ನು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ನಿಷೇಧಿಸಲಾಗಿದೆ. ಇದನ್ನು ಅರಿತು ರಾಯಚೂರು ಸಿಟಿಯ ನಾಗಕರಿಕರು ನಾವು ಪಿಓಪಿ ಗಣೇಶ ಮೂರ್ತಿ ಬಳಸುವುದಿಲ್ಲ ಎಂದು ಸಂಕಲ್ಪ ಮಾಡಿ ಮಣ್ಣಿನಿಂದ ನಿರ್ಮಿಸಿದ ವಿಗ್ರಹಗಳ ಬಳಕೆಗೆ ಒತ್ತು ಕೊಡಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಯಾರು ಸಹ ಬಳಸಕೂಡದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ ಜಿ. ಅವರು ಮಾತನಾಡಿ, ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಒದಗಿಸಲಾಗುವುದು. ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳು ಶಾಂತಿಯುವಾಗಿ ನಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಮಾಜದ ಮುಖಂಡರಾದ ಶ್ರೀನಿವಾಸ ಪತಂಗೆ, ಮುಖಂಡರಾದ ರವೀಂದ್ರ ಜಲ್ದಾರ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಎರಡನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಜಾನನ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X