Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಗಣೇಶ ಹಬ್ಬ ; 23 ಜನರ...

Raichur | ಗಣೇಶ ಹಬ್ಬ ; 23 ಜನರ ವಿರುದ್ಧ ಗಡಿಪಾರಿಗೆ ಕ್ರಮ: ಎಸ್‌ಪಿ ಅರುಣಾಂಗ್ಷು ಗಿರಿ

ವಾರ್ತಾಭಾರತಿವಾರ್ತಾಭಾರತಿ9 Sept 2026 5:53 PM IST
share
Raichur | ಗಣೇಶ ಹಬ್ಬ ; 23 ಜನರ ವಿರುದ್ಧ ಗಡಿಪಾರಿಗೆ ಕ್ರಮ: ಎಸ್‌ಪಿ ಅರುಣಾಂಗ್ಷು ಗಿರಿ

ರಾಯಚೂರು: ಸೆಪ್ಟೆಂಬರ್ 14ರಂದು ಜಿಲ್ಲೆಯಾದ್ಯಂತ ನಡೆಯಲಿರುವ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ರಾಯಚೂರು ಜಿಲ್ಲಾ ಪೊಲೀಸರು ವ್ಯಾಪಕ ಭದ್ರತಾ ಕ್ರಮ ಕೈಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 23 ಜನರ ವಿರುದ್ಧ ಗಡಿಪಾರು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2,570 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಎಲ್ಲ ಗಣೇಶ ಮಂಡಳಿಗಳಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳಲಾಗಿದೆ. ರಾಯಚೂರು ನಗರ ಸೇರಿದಂತೆ ಎಲ್ಲಾ ತಾಲೂಕು ಹಾಗೂ ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಶಾಂತಿ ಸಭೆಗಳು ನಡೆಸಲಾಗಿದೆ.

ಜಿಲ್ಲೆಯಲ್ಲಿ ದಾಖಲಾಗಿರುವ 1,557 ರೌಡಿ ಆಸಾಮಿಗಳ ಪೈಕಿ 1,454 ಜನರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇವರಲ್ಲಿ 1,124 ಜನರಿಂದ ತಾಲೂಕು ದಂಡಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮುಚ್ಚಳಿಕೆ ಪತ್ರ ಪಡೆದುಕೊಂಡಿದ್ದಾರೆ.

ಹಬ್ಬದ ಬಂದೋಬಸ್ತ್‌ಗೆ ಹೆಚ್ಚುವರಿ ಎಸ್‌ಪಿ, 4 ಡಿಎಸ್‌ಪಿಗಳು, 31 ಪಿಐ/ಸಿಪಿಐಗಳು, 122 ಎಎಸ್‌ಐಗಳು, 630 ಪೊಲೀಸ್ ಸಿಬ್ಬಂದಿ, 500 ಗೃಹರಕ್ಷಕ ದಳದ ಸಿಬ್ಬಂದಿ, 10 ಸಶಸ್ತ್ರ ಮೀಸಲು ಪಡೆ ತುಕಡಿಗಳು, 6 ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಎಎಸ್‌ಸಿ ತಂಡವನ್ನು ನಿಯೋಜಿಸಲಾಗಿದೆ.

ಗಣೇಶೋತ್ಸವದ ವೇಳೆ ಮಾದಕ ದ್ರವ್ಯ ಸೇವನೆ, ಬೈಕ್ ವೀಲಿಂಗ್, ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಕಿರಿಕಿರಿ ಉಂಟು ಮಾಡುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಜನರು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಶಾಂತಿ, ಸೌಹಾರ್ದ ಮತ್ತು ಕಾನೂನು ಪಾಲನೆಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Tags

Ganesh FestivalRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X