Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಅಂಗನವಾಡಿ ನೌಕರರ ಬೇಡಿಕೆ...

Raichur | ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರಗಳು ವಿಫಲ : ಶಾಂತ ಘಂಟಿ

ವಾರ್ತಾಭಾರತಿವಾರ್ತಾಭಾರತಿ6 Oct 2026 7:49 PM IST
share
Raichur | ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರಗಳು ವಿಫಲ : ಶಾಂತ ಘಂಟಿ

ರಾಯಚೂರು: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಐಸಿಡಿಎಸ್ ಯೋಜನೆಗೆ ನೀಡಲಾಗುತ್ತಿರುವ ಅನುದಾನವನ್ನು ಕಡಿತಗೊಳಿಸುವ ಮೂಲಕ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತ ಘಂಟಿ ಆರೋಪಿಸಿದರು.

ನಗರದ ಕನ್ನಡ ಭವನದಲ್ಲಿ ಮಂಗಳವಾರ ಅಂಗನವಾಡಿ ನೌಕರರ ಸಂಘ (ಸಿಐಟಿಯು) ರಾಯಚೂರು ತಾಲೂಕು ಘಟಕದ 8ನೇ ಸಮ್ಮೇಳನವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಅಂಗನವಾಡಿ ನೌಕರರಿಗೆ ಗೌರವಧನ ಹೆಚ್ಚಳ ಮಾಡದೆ, ಅವರ ಮೇಲೆ ಅನ್ಯ ಇಲಾಖೆಗಳ ಕೆಲಸಗಳ ಹೊರೆಯನ್ನು ಹೆಚ್ಚಿಸಲಾಗುತ್ತಿದೆ. ಕಡಿಮೆ ಗೌರವಧನದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಗೊಳಿಸುವುದಾಗಿ ಸರ್ಕಾರ ಹೇಳುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಅಂಗನವಾಡಿ ಕೇಂದ್ರಗಳನ್ನು ಕ್ರಮೇಣ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು, ಗೌರವಧನ ಹೆಚ್ಚಿಸಬೇಕು ಹಾಗೂ ಐಸಿಡಿಎಸ್ ಯೋಜನೆಯನ್ನು ಬಲಪಡಿಸಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ. ನೌಕರರ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಮುಂಬರುವ ಫೆಬ್ರವರಿಯಲ್ಲಿ ಮಂಡನೆಯಾಗಲಿರುವ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಅಂಗನವಾಡಿ ನೌಕರರಿಗೆ ವೇತನ ಹೆಚ್ಚಳ ಮಾಡದಿದ್ದರೆ, ಬಜೆಟ್ ಮಂಡನೆಯಾದ ಮರುದಿನದಿಂದಲೇ ಸಂಸದರು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಈ ಹೋರಾಟದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಐಸಿಡಿಎಸ್ ಯೋಜನೆಯನ್ನು ಉಳಿಸಿ, ಅಂಗನವಾಡಿ ನೌಕರರ ಉದ್ಯೋಗ ಮತ್ತು ಹಕ್ಕುಗಳನ್ನು ರಕ್ಷಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಎಚ್. ಪದ್ಮಾ ವಹಿಸಿದ್ದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಕರ್ನಾಟಕ ಪ್ರಾಂತ ರೈತ ಸಂಘದ ಕೆ.ಜಿ. ವೀರೇಶ್, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಚಿ ವರಲಕ್ಷ್ಮೀ, ಎಸ್. ಗಂಗಮ್ಮ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮ್ಮೇಳನಕ್ಕೂ ಮುನ್ನ ಸಂಘಟನೆಯ ಧ್ವಜಾರೋಹಣವನ್ನು ಎಚ್. ಪದ್ಮಾ ನೆರವೇರಿಸಿದರು. ಬಳಿಕ ವಿವಿಧ ಬೇಡಿಕೆಗಳು, ಸಂಘಟನೆಯ ಮುಂದಿನ ಹೋರಾಟಗಳು ಹಾಗೂ ಅಂಗನವಾಡಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಯಿತು.

Tags

Anganwadi workersRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X