ರಾಯಚೂರು | ಎರಡು, ಮೂರು ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆ ಹಣ : ಪಾಮಯ್ಯ ಮುರಾರಿ

ರಾಯಚೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ 2025-26ನೇ ಸಾಲಿನ ಮೊದಲನೇ ಕಂತಿನ ಜಿಲ್ಲೆಯ 3,21,001 ಫಲಾನುಭವಿಗಳಿಗೆ 64,20,02,000 ರೂ.ಗಳ ಮೊತ್ತವನ್ನು ಡಿಬಿಟಿ ಮೂಲಕ ಚಾಲ್ತಿ ಮಾಡಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾವಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story