Raichur | ಸಾರಿಗೆ ಬಸ್–ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಯಚೂರು : ತಾಲೂಕಿನ ಸುಲ್ತಾನಪುರ ಸಮೀಪ ಭಾನುವಾರ ಮಧ್ಯಾಹ್ನ ಸುಮಾರು 12:30ರ ವೇಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗಬ್ಬೂರು ಗ್ರಾಮದ ನಿವಾಸಿ ರಮೇಶ ನಾಯಕ (30) ಎಂದು ಗುರುತಿಸಲಾಗಿದೆ.
ದೇವದುರ್ಗ ಡಿಪೋದ ವೇಗದೂತ (ನಾನ್‌ಸ್ಟಾಪ್) ಬಸ್ ರಾಯಚೂರಿನಿಂದ ದೇವದುರ್ಗದತ್ತ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story




