Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ತಿಪ್ಪೆಯಲ್ಲಿ ಆರೋಗ್ಯ ಇಲಾಖೆಯ...

Raichur | ತಿಪ್ಪೆಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ : ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ14 Oct 2026 6:06 PM IST
share
Raichur | ತಿಪ್ಪೆಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ : ಸಾರ್ವಜನಿಕರ ಆಕ್ರೋಶ

ರಾಯಚೂರು: ಬಡ ರೋಗಿಗಳಿಗೆ ತಲುಪಬೇಕಿದ್ದ ಆರೋಗ್ಯ ಇಲಾಖೆಯ ಔಷಧಿಗಳನ್ನು ನಗರದ ಬಸವೇಶ್ವರ ವೃತ್ತದ ಬಳಿಯ ರಾಯಚೂರು ಕೋಟೆಯ ಕಂದಕದ ಸಮೀಪ ತಿಪ್ಪೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.

ಮಧುಮೇಹ, ರಕ್ತದೊತ್ತಡ, ಜ್ವರ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಬಳಸುವ ಔಷಧಿಗಳ ಬಾಕ್ಸ್‌ಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದ್ದ ಈ ಔಷಧಿಗಳು ಬಳಕೆಯಾಗದೆ ಅವಧಿ ಮುಗಿದಿವೆ.

ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕಿತ್ತು. ಆದರೆ, ಸಾರ್ವಜನಿಕರು ಹಾಗೂ ಜಾನುವಾರುಗಳು ಓಡಾಡುವ ಪ್ರದೇಶದಲ್ಲಿ ಔಷಧಿಗಳನ್ನು ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಲಾದ ಔಷಧಿಗಳ ದಾಸ್ತಾನು ಮತ್ತು ನಿರ್ವಹಣೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ರಾಯಚೂರು ನಗರದಲ್ಲಿ ಈ ರೀತಿಯ ಘಟನೆಗಳು ಈ ಹಿಂದೆಯೂ ಹಲವು ಬಾರಿ ನಡೆದಿವೆ. ಮತ್ತೆ ಇಂತಹ ಘಟನೆ ಮರುಕಳಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡ ರೋಗಿಗಳಿಗೆ ತಲುಪಬೇಕಾದ ಔಷಧಿಗಳು ಬಳಕೆಯಾಗದೆ ವ್ಯರ್ಥವಾಗುತ್ತಿರುವುದಕ್ಕೆ ಹೊಣೆ ಯಾರು ಎಂಬ ಪ್ರಶ್ನೆಯೂ ಮೂಡಿದೆ. ಈ ಹಿಂದೆಯೂ ಔಷಧಿಗಳು ಪೋಲಾದ ಪ್ರಕರಣಗಳು ನಡೆದಿದ್ದರೂ, ಸಂಬಂಧಪಟ್ಟ ಇಲಾಖೆ ತಿಪ್ಪೆ ಸಾರಿಸುವ ಕೆಲಸ ಮಾಡಿದೆ ಹೊರತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಔಷಧಿಗಳನ್ನು ಎಸೆದವರ ವಿರುದ್ಧ ಸೂಕ್ತ ಕ್ರಮ:

ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ಧ ಎಫ್‌ಐಆರ್ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಂದಿತಾ ಎಂ.ಎನ್. ತಿಳಿಸಿದ್ದಾರೆ.

ಆರೋಗ್ಯ ಇಲಾಖೆಗೆ ಸರಬರಾಜಾಗುವ ಔಷಧಿಗಳನ್ನು ಬಳಕೆ ಮಾಡಿದ ಬಳಿಕ ಅವುಗಳ ಅವಧಿ ಮುಗಿದರೆ, ಸರ್ಕಾರದ ಮಾರ್ಗಸೂಚಿಯಂತೆ ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತದೆ. ಪ್ರಸ್ತುತ ಪ್ರಕರಣದಲ್ಲಿ ಔಷಧಿಗಳನ್ನು ಎಸೆದವರನ್ನು ಇ-ಔಷಧ ಪೋರ್ಟಲ್ ಮೂಲಕ ಪತ್ತೆಹಚ್ಚಿ, ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಔಷಧಿಗಳು ಗೃಹ ಆರೋಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಮುದಾಯ ಆರೋಗ್ಯ ಅಧಿಕಾರಿಗಳ ಮೂಲಕ ಮನೆಮನೆಗೆ ತೆರಳಿ ವಿತರಿಸಬೇಕಾದ ಮಾತ್ರೆಗಳಾಗಿವೆ. ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಿಂದ ನಿರಂತರವಾಗಿ ಸಭೆಗಳನ್ನು ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಎಲ್ಲ ತಾಲೂಕುಗಳಲ್ಲಿ ಔಷಧಿಗಳ ಬಳಕೆಯ ಮೇಲೆ ನಿರಂತರ ನಿಗಾ ವಹಿಸಲಾಗುತ್ತಿದ್ದು, ಮಾತ್ರೆಗಳನ್ನು ವಿತರಿಸಿದ ವಿವರಗಳನ್ನು ಇ-ಔಷಧ ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಂದಕದ ಬಳಿ ಔಷಧಿಗಳು ಪತ್ತೆಯಾಗಿರುವ ಮಾಹಿತಿ ದೊರೆತ ತಕ್ಷಣ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಹಾಗೂ ತಂಡವನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲಾಗಿದೆ. ಪತ್ತೆಯಾದ ಔಷಧಿಗಳು ಅವಧಿ ಮೀರಿದವುಗಳಾಗಿದ್ದು, ಅವುಗಳನ್ನು ಈಗಾಗಲೇ ಸಂಗ್ರಹಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ. ಈ ಕುರಿತು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

Tags

medicinesHealth DepartmentRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X