Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು : ಮಹಾನಗರ ಪಾಲಿಕೆಗೆ 3...

ರಾಯಚೂರು : ಮಹಾನಗರ ಪಾಲಿಕೆಗೆ 3 ತಿಂಗಳೊಳಗೆ ಚುನಾವಣೆ ನಡೆಸಲು ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ1 May 2026 11:20 AM IST
share
ರಾಯಚೂರು : ಮಹಾನಗರ ಪಾಲಿಕೆಗೆ 3 ತಿಂಗಳೊಳಗೆ ಚುನಾವಣೆ ನಡೆಸಲು ಹೈಕೋರ್ಟ್ ನಿರ್ದೇಶನ

ರಾಯಚೂರು: ಮಹಾನಗರ ಪಾಲಿಕೆಗೆ ಮುಂದಿನ ಮೂರು ತಿಂಗಳೊಳಗೆ ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ಆದೇಶ ನೀಡಿ ತೀರ್ಪು ಪ್ರಕಟಿಸಿದೆ.

ಮುಂದಿನ ಚುನಾವಣೆ ನಡೆಯುವವರೆಗೆ ನಗರಸಭೆ ಸದಸ್ಯರ ಅಧಿಕಾರಾವಧಿಯನ್ನು ಮುಂದುವರಿಸಬೇಕು ಎಂದು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ಹೈಕೋರ್ಟ್ ಕಲಬುರಗಿ ಪೀಠ ಎತ್ತಿಹಿಡಿದಿದ್ದು, ಎ. 28ರಂದು ಈ ತೀರ್ಪು ಪ್ರಕಟಿಸಿದೆ.

ನ. 01, 2025ಕ್ಕೆ ನಗರಸಭೆ ಸದಸ್ಯರ ಅಧಿಕಾರಾವಧಿ ಮುಗಿದಿದೆ. ಮತ್ತೆ ಚುನಾವಣೆ ನಡೆಯುವವರೆಗೆ ಅಧಿಕಾರಾವಧಿಯನ್ನು ಮುಂದುವರಿಸುವುದು ಸೆಕ್ಷನ್ 243 ಕಾನೂನಿನ ಉಲ್ಲಂಘನೆಯಾಗುತ್ತದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ಕಲಬುರಗಿ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಜಸ್ಟಿಸ್ ಸೂರಜ್ ಗೋವಿಂದರಾಜ್ ಹಾಗೂ ಡಾ. ಜಸ್ಟಿಸ್ ಚಿಲಕೂರ್ ಸುಮಲತಾ ಅವರು ತೀರ್ಪು ನೀಡಿದ್ದಾರೆ.

2018ರಲ್ಲಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದವರು 2020ರಲ್ಲಿ ಪ್ರಥಮ ಸಭೆ ನಡೆಸಿದ್ದರು. 2023-24ರಲ್ಲಿ ಅಧ್ಯಕ್ಷೀಯ ಮೀಸಲಾತಿ ವಿವಾದ ಕೋರ್ಟ್ ಮೆಟ್ಟಿಲೇರಿದ ಕಾರಣ 5 ತಿಂಗಳ ಕಾಲ ಆಡಳಿತಾಧಿಕಾರಿಯನ್ನು ನೇಮಿಸಲಾಗಿತ್ತು. ಅದರ ನಂತರ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನಗರಸಭೆ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ 01-11-2025ಕ್ಕೆ ಪೂರ್ಣಗೊಂಡಿದೆ ಎಂದು ಸೂಚಿಸಿತ್ತು.

ಇದನ್ನು ಪ್ರಶ್ನಿಸಿದ 23 ಸದಸ್ಯರು ಕರ್ನಾಟಕ ಮುನ್ಸಿಪಲ್ ಕಾಯ್ದೆ 503ನೇ ಕಲಂ ಅಡಿಯಲ್ಲಿ 15 ತಿಂಗಳ ಆಡಳಿತಾಧಿಕಾರಿಗಳ ಅವಧಿಯನ್ನು ಹೊರಗಿಡಬೇಕು ಎಂದು ಹೈಕೋರ್ಟ್ ಕಲಬುರಗಿ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠವು ಅವರ ಮೇಲ್ಮನವಿಯನ್ನು ಫೆಬ್ರವರಿ 26, 2026ರಂದು ತಿರಸ್ಕರಿಸಿತ್ತು. ಇದೀಗ ಅಂತಿಮವಾಗಿ ಎಲ್ಲಕ್ಕೂ ತೆರೆಬಿದ್ದಿದ್ದು, ಮುಂದಿನ ಮೂರು ತಿಂಗಳೊಳಗೆ ಚುನಾವಣೆ ನಡೆಸಲು ಹೈಕೋರ್ಟ್ ಕಲಬುರಗಿ ಪೀಠ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

Tags

RaichurHigh CourtMunicipal Corporation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X