Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ರಾಜಕಾಲುವೆ ಬಳಿ ಬೃಹತ್...

Raichur | ರಾಜಕಾಲುವೆ ಬಳಿ ಬೃಹತ್ ಗುಂಡಿ: ಪಾಲಿಕೆ ವಿರುದ್ಧ ರಾಮನಗೌಡ ಏಗನೂರು ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ17 Oct 2026 5:58 PM IST
share
Raichur | ರಾಜಕಾಲುವೆ ಬಳಿ ಬೃಹತ್ ಗುಂಡಿ: ಪಾಲಿಕೆ ವಿರುದ್ಧ ರಾಮನಗೌಡ ಏಗನೂರು ಆಕ್ರೋಶ

ರಾಯಚೂರು: ನಗರದ ಚಂದ್ರಮೌಳೇಶ್ವರ ವೃತ್ತದ ಬಳಿಯ ರಾಜಕಾಲುವೆ ಸಮೀಪ ರಸ್ತೆ ಒಡೆದು ಬೃಹತ್ ಗುಂಡಿ ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ಸೋರಿಕೆಯಾಗುತ್ತಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

ರಾಜಕಾಲುವೆಯ ಪಕ್ಕದಲ್ಲಿ ಕುಡಿಯುವ ನೀರಿನ ರೈಸಿಂಗ್ ಪೈಪ್‌ಲೈನ್ ಹಾದುಹೋಗಿದ್ದು, ನಿಜಾಮರ ಕಾಲದಲ್ಲಿ ಅಳವಡಿಸಲಾಗಿದ್ದ ಪೈಪ್‌ಲೈನ್ ಹಳೆಯದಾಗಿ ಒಡೆದಿದೆ. ಇದರಿಂದ ನೀರು ಚಿಮ್ಮುತ್ತಿದ್ದು, ಕಾಲುವೆಯ ಕಲುಷಿತ ನೀರು ಕುಡಿಯುವ ನೀರಿನ ಪೈಪ್‌ಲೈನ್‌ಗೆ ಸೇರುವ ಸಾಧ್ಯತೆಯಿದೆ. ಇದರಿಂದ ಕಲುಷಿತ ನೀರು ಸೇವಿಸಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುವ ಆತಂಕ ಎದುರಾಗಿದೆ.

ಶನಿವಾರ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಚಂದ್ರಮೌಳೇಶ್ವರ ರಸ್ತೆಗೆ ಭೇಟಿ ನೀಡಿ, ರಾಜಕಾಲುವೆ ಸಮೀಪದ ಸ್ಥಳವನ್ನು ಪರಿಶೀಲಿಸಿದರು. ಸ್ಥಳೀಯರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ನಿರ್ಲಕ್ಷ್ಯ ವಹಿಸಿರುವ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂದ್ರಮೌಳೇಶ್ವರ ರಸ್ತೆ ನಗರದ ಹೃದಯಭಾಗವಾಗಿದ್ದು, ಪ್ರತಿದಿನ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ರಾಜಕಾಲುವೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ಕಲುಷಿತ ನೀರು ಸೇರುತ್ತಿದೆ. ಈ ನೀರು ಕುಡಿದ ಜನರು ಕಿಡ್ನಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಆರೋಪಿಸಿದರು.

ನಗರದಲ್ಲಿ ಕನಿಷ್ಠ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಹಾಗೂ ಸುಸಜ್ಜಿತ ರಸ್ತೆ ವ್ಯವಸ್ಥೆಯನ್ನು ಕಲ್ಪಿಸಲು ಸಾಧ್ಯವಾಗದಿದ್ದರೆ ಮಹಾನಗರ ಪಾಲಿಕೆ ಇರುವುದಾದರೂ ಏಕೆ ಎಂದು ಪ್ರಶ್ನಿಸಿದ ಅವರು, ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಕೋಟ್ಯಂತರ ರೂಪಾಯಿ ಅನುದಾನ ಬಂದಿದ್ದರೂ ಜನರಿಗೆ ಮೂಲಭೂತ ಸೌಕರ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜಕಾಲುವೆ ಒಡೆದು ರಸ್ತೆ ಕುಸಿದ ಪರಿಣಾಮ ನಿರ್ಮಾಣವಾಗಿರುವ ಬೃಹತ್ ಗುಂಡಿಗೆ ಬಿದ್ದು ಹಲವರು ಗಾಯಗೊಂಡಿದ್ದಾರೆ. ದನಕರುಗಳು ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆಗಳೂ ನಡೆದಿವೆ ಎಂದು ಅವರು ಆರೋಪಿಸಿದರು. ಇಷ್ಟೆಲ್ಲ ಅನಾಹುತಗಳು ಸಂಭವಿಸಿದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆಯತ್ತ ಗಮನಹರಿಸುತ್ತಿಲ್ಲ. ಹಲವು ವರ್ಷಗಳಿಂದ ದುರಸ್ತಿ ಕಾರ್ಯ ಕೈಗೊಳ್ಳದೆ ಕೇವಲ ಒಂದು ಬ್ಯಾರಿಕೇಡ್ ಅಳವಡಿಸಿರುವುದರಿಂದ ರಸ್ತೆಯ ಎರಡೂ ಬದಿಗಳಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ ಎಂದು ದೂರಿದರು.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಪರಿಹರಿಸಿ, ಪೈಪ್‌ಲೈನ್ ದುರಸ್ತಿ ಹಾಗೂ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆ ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ರಾಮನಗೌಡ ಏಗನೂರು ಎಚ್ಚರಿಕೆ ನೀಡಿದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X