Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಆಯುಷ್ ವೈದ್ಯರ ಮೇಲಿನ...

Raichur | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ22 Sept 2026 5:56 PM IST
share
Raichur | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ರಾಯಚೂರು: ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸದೆ ತಕ್ಷಣ ಕ್ರಮ ಕೈಗೊಳ್ಳುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ನಡೆಸಲಾಯಿತು.

ಧರಣಿಯಲ್ಲಿ ಎನ್‌ಸಿಐಎಸ್‌ಎಂ ಮತ್ತು ಎನ್‌ಸಿಎಚ್ ಕಾಯ್ದೆಗಳ ಅನ್ವಯ ಆಯುಷ್ ವೈದ್ಯರು ಕೆಲಸ ನಿರ್ವಹಿಸಲು ಅನುಕೂಲ ಕಲ್ಪಿಸಬೇಕು. ಆಧುನಿಕ ಔಷಧಗಳ ಬಳಕೆಗೆ ಅನುಮತಿ ನೀಡಬೇಕು ಹಾಗೂ ಗೆಜೆಟ್ ಅಧಿಸೂಚನೆಗಳಿಗೆ ಅನುಗುಣವಾಗಿ ಆಯುಷ್ ವೈದ್ಯರ ವೃತ್ತಿಪರ ಹಕ್ಕುಗಳು ಮತ್ತು ಸೇವಾವಕಾಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೆಪಿಎಂಇ ನೋಂದಣಿ ಮತ್ತು ನವೀಕರಣ, ಫೈರ್ ಎನ್‌ಒಸಿ ಸೇರಿದಂತೆ ಆಯುಷ್ ಕ್ಲಿನಿಕ್‌ಗಳಿಗೆ ಸಂಬಂಧಿಸಿದ ಪ್ರಾಯೋಗಿಕ ಸಮಸ್ಯೆಗಳಿಗೆ ಸರಳ ಹಾಗೂ ಸ್ಪಷ್ಟ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಆಯುಷ್ ಘಟಕದ ಅಧ್ಯಕ್ಷ ಡಾ. ಮೋಹನ್ ಬೆನಕದಾರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಲೋಪತಿ ವೈದ್ಯರಂತೆ ಆಯುಷ್ ವೈದ್ಯರಿಗೂ ಸಮಾನ ವೇತನ ನೀಡಬೇಕು. ಎನ್‌ಸಿಐಎಸ್‌ಎಂ ಮಾನ್ಯತೆ ಪಡೆದ ಪದವಿ ಕೋರ್ಸ್‌ಗಳು, ಪಠ್ಯಕ್ರಮ ಹಾಗೂ ವೈದ್ಯಕೀಯ ವ್ಯಾಪ್ತಿಯ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸಮಗ್ರ ಅರಿವು ಹೊಂದಬೇಕು ಎಂದು ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ನೀಡಲಾಗುವ ಆಯುಷ್ ಪದವಿಯ ಕಾನೂನುಬದ್ಧ ವ್ಯಾಪ್ತಿಯನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಆಯುಷ್ ವೈದ್ಯರ ವೃತ್ತಿಪರ ಹಕ್ಕುಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಆನಂದ ಎಸ್. ಕಿರಿಶಾಳ ಮಾತನಾಡಿ, ರೋಗಿಗಳಲ್ಲದವರು ದೂರು ನೀಡಿದ ಕೂಡಲೇ ಆಯುಷ್ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅಲೋಪತಿ ವೈದ್ಯರ ವಿರುದ್ಧವೂ ದೂರುಗಳಿದ್ದರೂ ತನಿಖೆ ನಡೆಸಲಾಗುತ್ತದೆ. ಆದರೆ ಆಯುಷ್ ವೈದ್ಯರ ಮೇಲಷ್ಟೇ ತ್ವರಿತ ಕ್ರಮ ಯಾಕೆ ಎನ್ನುವ ಪ್ರಶ್ನೆ ಎದ್ದಿದೆ ಎಂದು ಹೇಳಿದರು.

ದೇವದುರ್ಗ ಮತ್ತು ಮಾನ್ವಿ ತಾಲೂಕು ವೈದ್ಯಾಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತಾಲೂಕು ಮಟ್ಟದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಂದಿತಾ ಮಾತನಾಡಿ, ಆಯುಷ್ ಫೆಡರೇಶನ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಕುರಿತು ಸೋಮವಾರ ಮಾಹಿತಿ ನೀಡಲಾಗಿದ್ದು, ಪರಿಶೀಲನೆಗೆ ಸ್ವಲ್ಪ ಸಮಯಾವಕಾಶ ಕೋರಿದ್ದೇವೆ ಎಂದು ತಿಳಿಸಿದರು.

ಆಯುಷ್ ವೈದ್ಯರನ್ನು ಗುರಿಯಾಗಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಆರೋಪದ ಕುರಿತು ಪರಿಶೀಲನೆ ನಡೆಸಲಾಗುವುದು. ತಾಲೂಕು ವೈದ್ಯಾಧಿಕಾರಿಗಳ ವಿರುದ್ಧ ಬಂದಿರುವ ದೂರುಗಳ ವಿಚಾರಣೆಯೂ ನಡೆಯಲಿದೆ. ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತಿಭಟನೆಯಲ್ಲಿ ಡಾ. ಶ್ರೀಕಾಂತ ಕೊಂಕಣಿ, ಡಾ. ಅಮೀತ್ ಎಂ.ಎಸ್., ಡಾ. ಆನಂದ ಕುಲಕರ್ಣಿ, ಡಾ. ಮಹಾವೀರ್ ಹಾವೇರಿ, ಡಾ. ಸಂದೀಪ್ ಕುಲಕರ್ಣಿ, ಡಾ. ರವೀಂದ್ರ, ಡಾ. ಎ.ಡಿ. ಹನೀಫ್, ಡಾ. ಸುನೀಲ್ ರಾಯ್, ಡಾ. ರಾಜೇಂದ್ರ, ಡಾ. ಶಶಿಕಾಂತ್ ಹೆಚ್.ಸಿ., ಡಾ. ಸುನಿಲ್ ಆರ್. ಹಿರೇಮಠ, ಡಾ. ಸಂತೋಷ ಎಂ.ಬಿ., ಡಾ. ಶ್ರೀನಿವಾಸ ಕೆ. ಬನ್ನಿಗೋಳ, ಡಾ. ಸೋಮಶೇಖರ್ ಹುಡೆದ್, ಡಾ. ಜಿ.ಬಿ. ಕುಂಬಾರ, ಡಾ. ಪ್ರಕಾಶ ಪಾಟೀಲ್ ಸೇರಿದಂತೆ ನೂರಾರು ಆಯುಷ್ ವೈದ್ಯರು ಭಾಗವಹಿಸಿದ್ದರು.




Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X