Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ...

ರಾಯಚೂರು | ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಮೂಲಭೂತ ಸೌಲಭ್ಯಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ16 Jun 2025 7:33 PM IST
share
ರಾಯಚೂರು | ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಮೂಲಭೂತ ಸೌಲಭ್ಯಗಳ ಪರಿಶೀಲನೆ

ರಾಯಚೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ರಾಯಚೂರು ನಗರದ ವಿವಿಧ ಸರ್ಕಾರಿ ಶಾಲೆ, ಖಾಸಗಿ ಶಾಲೆ, ವಸತಿ ನಿಲಯ ಹಾಗೂ ಆಸ್ಪತ್ರೆಗಳಿಗೆ ಜೂ.6ರಂದು ಭೇಟಿ ನೀಡಿ ಮಕ್ಕಳ ಸುರಕ್ಷತೆ ಮತ್ತು ಮಕ್ಕಳಿಗೆ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.

ಮೊದಲಿಗೆ ನಗರದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಸಿಬಿಎಸ್‌ಇ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಮಕ್ಕಳ ಕುಂದುಕೊರತೆಗಳ ಬಗ್ಗೆ, ಶುಲ್ಕದ ವಿವರ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಬಗ್ಗೆ ಪರಿಶೀಲಿಸಿದರು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ವಸತಿ ನಿಲಯ ಹಾಗೂ ಇತರೆ ಸರ್ಕಾರಿ ಕಟ್ಟಡಗಳ ಭಾಗದಲ್ಲಿ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಸಹಾಯವಾಣಿ -112 ಕಡ್ಡಾಯವಾಗಿ ಬರೆಸಬೇಕು, ಮಕ್ಕಳ ಹಕ್ಕುಗಳ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ನಂತರ ಬೋಳಮಾನ ದೊಡ್ಡಿ ಅಲ್ಪಸಂಖ್ಯಾತ ವಸತಿ ನಿಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಆಹಾರ ಸಾಮಗ್ರಿಗಳ ಗುಣಮಟ್ಟ, ಸ್ವಚ್ಚತೆ, ಕುಡಿಯುವ ನೀರಿನ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ಮಕ್ಕಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಸೌಲತ್ತುಗಳನ್ನು ಸರಿಯಾಗಿ ತಲುಪಿಸಬೇಕು ಮಕ್ಕಳ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಆಯೋಗವು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ನಂತರ ಮುನ್ನೂರುವಾಡಿ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಬಿಸಿ ಊಟ ವಿತರಣೆ, ಮೊಟ್ಟೆ ವಿತರಣೆಯನ್ನು ಪರಿಶೀಲಿಸಿದರು. ಶಾಲೆಗಳಿಗೆ ಬಿಸಿ ಊಟಕ್ಕಾಗಿ ಪೂರೈಕೆ ಆಗಿರುವ ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಿ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪಡೆದು ಮಕ್ಕಳಿಗೆ ವಿತರಿಸಲು ಸೂಚಿಸಿದರು.

ಶಾಲೆಯ ಆವರಣದಲ್ಲಿ ನೀರು ನಿಂತಿದ್ದು, ಮಕ್ಕಳಿಗೆ ಆಟವಾಡಲು ಸಮಸ್ಯೆ ಆಗುತ್ತದೆ. ಕೂಡಲೇ ಮೈದಾನವನ್ನು ಸಮತಟ್ಟುಗೊಳಿಸಿ ಶಾಲೆಯ ನಿರ್ವಹಣೆಗೆ ಬಿಡುಗಡೆ ಆದ ಅನುದಾನವನ್ನು ಬಳಕೆ ಮಾಡಿಕೊಂಡು ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಲು ಕ್ಷೇತ್ರ ಶಿಕ್ಷಣ ಅಧಿಕಾರಿ ಈರಣ್ಣ ಕೋಸಗಿ ಇವರಿಗೆ ಸೂಚಿಸಿದರು. ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಎನ್‌ಆರ್‌ಸಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್ ಹಾವಿನ್, ಕ್ಷೇತ್ರ ಶಿಕ್ಷಣ ಅಧಿಕಾರಿ ಈರಣ್ಣ ಕೊಸಗಿ, ರಕ್ಷಣಾಧಿಕಾರಿ ಹನುಮೇಶ್‌ ಇತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X